ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೇಹಳ್ಳಿ ಕೆರೆಗೆ ಬಿದ್ದು ವ್ಯಕ್ತಿ ಸಾವು

Published 26 ಫೆಬ್ರುವರಿ 2024, 4:51 IST
Last Updated 26 ಫೆಬ್ರುವರಿ 2024, 4:51 IST
ಅಕ್ಷರ ಗಾತ್ರ

ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಸಾರಿಗೇಹಳ್ಳಿ ಕೆರೆಯಲ್ಲಿ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಮಾಯಸಂದ್ರ ಹೋಬಳಿಯ ಬೊಮ್ಮೇನಹಳ್ಳಿ ಗ್ರಾಮದ ನಿವಾಸಿ ಶಿವನಂಜಯ್ಯ (55) ಮೃತರು. ಅವರು ಫೆ.20ರಂದು ದಂಡಿನಶಿವರ ಹೋಬಳಿಯ ಜಕ್ನಹಳ್ಳಿಯ ಮಗಳ ಮನೆಗೆ ಬಂದಿದ್ದರು. ಫೆ.21ರ ಬೆಳಿಗ್ಗೆ ಊರಿಗೆ ಹೋಗುವುದಾಗಿ ಹೇಳಿ ಮಗಳ ಮನೆಯಿಂದ ಹೊರಟಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಮನೆಗೆ ಬಾರದ ಶಿವನಂಜಯ್ಯನವರ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಭಾನುವಾರ ಬೆಳಿಗ್ಗೆ ಸಾರಿಗೇಹಳ್ಳಿ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT