ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್ | ಅಪಘಾತ: ಪತಿ ಸಾವು, ಪತ್ನಿ ಸ್ಥಿತಿ ಗಂಭೀರ

Published 27 ಏಪ್ರಿಲ್ 2024, 14:37 IST
Last Updated 27 ಏಪ್ರಿಲ್ 2024, 14:37 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡನಕುಪ್ಪೆ ಗ್ರಾಮದ ಬಳಿ ಶನಿವಾರ ಎಳನೀರು ತುಂಬಿಕೊಂಡು ಹೋಗುತ್ತಿದ್ದ ಸರಕು ಸಾಗಣೆ ವಾಹನ, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪತಿ ಮೃತಪಟ್ಟು, ಪತ್ನಿ ಮತ್ತು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ.

ರಾಮನಗರ ಜಿಲ್ಲೆ ಕೂಟಗಲ್ ಹೋಬಳಿ ಗುಂಗರಹಳ್ಳಿ ಗ್ರಾಮದ ಸಿದ್ಧರಾಜು (35) ಮೃತರು. ಇವರು ಪತ್ನಿ ಅರ್ಪಿತಾ (32) ಮಕ್ಕಳಾದ ಕುಸ್ಮಿತಾ (4), ಒಂದು ವರ್ಷದ ಹೆಣ್ಣಮಗುವಿನೊಂದಿಗೆ ಹುಲಿಯೂರುದುರ್ಗದ ಹಳೇವೂರಮ್ಮ ದೇವಾಲಯಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅರ್ಪಿತಾ ಸ್ಥಿತಿ ಗಂಭೀರವಾಗಿದೆ. ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT