ಬುಧವಾರ, ಮಾರ್ಚ್ 29, 2023
23 °C

ಶಿರಾ| ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದ ಸಮೀಪ ಬುಧವಾರ ರಾತ್ರಿ ನಿಂತಿದ್ದ ವ್ಯಕ್ತಿಗೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು 35 ವರ್ಷದ ಅಪರಿಚಿತ ವ್ಯಕ್ತಿ ಮೃತ ಪಟ್ಟಿದ್ದಾನೆ.

ಶಿರಾದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ಲಾರಿ ಡಿವೈಡರ್ ಮೇಲೆ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ತಲೆಗೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿದ್ದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕುರುಬರಹಳ್ಳಿಯ ಲಾರಿ ಚಾಲಕ ರಾಜು ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು