ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ತಿಪಟೂರು | ಅಪಘಾತದಲ್ಲಿ ವ್ಯಕ್ತಿ ಸಾವು

Published 1 ಜೂನ್ 2024, 14:02 IST
Last Updated 1 ಜೂನ್ 2024, 14:02 IST
ಅಕ್ಷರ ಗಾತ್ರ

ತಿಪಟೂರು: ರಾಷ್ಟ್ರೀಯ ಹೆದ್ದಾರಿ 206ರ ಮತ್ತಿಹಳ್ಳಿ ಗೇಟ್ ಬಳಿ ತಿಪಟೂರಿನಿಂದ ಅರಸೀಕೆರೆ ಕಡೆ ತೆರಳುತ್ತಿದ್ದ ಬೈಕ್‌ಗೆ ನಾಯಿ ಅಡ್ಡ ಬಂದ ಕಾರಣ ಬೈಕ್‌ ಅನ್ನು ಬಲಕ್ಕೆ ತಿರುಗಿಸಿದ್ದಾರೆ. ಆಗ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಹಿಂಬದಿ ಸವಾರ ಪೆದ್ದಿಹಳ್ಳಿ ಗ್ರಾಮದ ನಂಜಪ್ಪ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್‌ ಸವಾರ ಶಿವಪ್ಪ ಗಾಯಗೊಂಡಿದ್ದಾರೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT