ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

Last Updated 25 ಅಕ್ಟೋಬರ್ 2022, 10:52 IST
ಅಕ್ಷರ ಗಾತ್ರ

ತಿಪಟೂರು: ಸ್ನೇಹಿತರೊಂದಿಗೆ ಸೇರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿ ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ಬಳಿಯ ಅಣ್ಣಯ್ಯ ನಗರದಲ್ಲಿ ದಿವಾಕರ (33) ಎಂಬುವರು ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಸೇರಿ ಆಚರಣೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ 3-4 ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ದಿವಾಕರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಸೇರಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ದಿವಾಕರ ದಸರೀಘಟ್ಟ ಗ್ರಾಮದ ಬಳಿಯ ಹುಚ್ಚನಹಳ್ಳಿ ಗ್ರಾಮದವರಾಗಿದ್ದು ನಗರದ ವಿದ್ಯಾನಗರದಲ್ಲಿ ವಾಸವಾಗಿದ್ದರು.

ಕೊಲೆಗೆ ಕಾರಣ ಗೊತ್ತಾಗಿಲ್ಲ. ಹಣಕಾಸು, ಮಹಿಳೆ ವಿಚಾರದಲ್ಲಿ ತನಿಖೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT