ಗುರುವಾರ , ಮಾರ್ಚ್ 23, 2023
30 °C

ಕೊರಟಗೆರೆ: ಪತ್ನಿಯ ಮೇಲೆ‌ ಅನುಮಾನಗೊಂಡು ಕೊಲೆ ಮಾಡಿದ ಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ಗಂಡನೇ‌ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಮಧ್ಯವೆಂಕಟಾಪುರ ಗ್ರಾಮದ ಬಳಿಯ ಭಕ್ತರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಾಕಮ್ಮ (55) ಕೊಲೆಯಾದ ಮಹಿಳೆ. ರಂಗಸ್ವಾಮಿ ಕೊಲೆ ಮಾಡಿರುವ ಆರೋಪಿ. ಪತ್ನಿಯ ಮೇಲೆ‌ ಅನುಮಾನಗೊಂಡು ಆಗಾಗ ರಂಗಸ್ವಾಮಿ ಜಗಳ ಮಾಡುತ್ತಿದ್ದರು.

ಅದೇ ರೀತಿ ಗುರುವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು, ಸಾಕಮ್ಮ ತಲೆಗೆ ಬಲವಾಗಿ ಹೊಡೆದಿದ್ದಾರೆ. ಇದರಿಂದ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಿಪಿಐ ಕೆ.ಸುರೇಶ್, ಪಿಎಸ್ಐ ರೇಣುಕಾಯಾದವ್ ಭೇಟಿ ನೀಡಿದ್ದರು. ಆರೋಪಿ ರಂಗಸ್ವಾಮಿ ತಲೆಮರೆಸಿಕೊಂಡಿದ್ದು, ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು