ತುಮಕೂರು: ತಾಲ್ಲೂಕಿನ ಕಂಬಳಾಪುರ ಬಳಿಯ ವೈ.ಕೆ.ಸರ್ಕಲ್‌ನಲ್ಲಿ ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ಸ್ನೇಹಿತರು ಸೇರಿಕೊಂಡು ಗಿರೀಶ್ (38) ಎಂಬುವರನ್ನು ಕೊಲೆ ಮಾಡಿದ್ದಾರೆ.
ಸ್ನೇಹಿತರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ರಿಪೀಸ್ ಪಟ್ಟಿಯಿಂದ ಹಲ್ಲೆ ಮಾಡಿದ್ದು, ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿಗಳಾದ ಅಣ್ಣಪ್ಪ, ಸ್ವಾಮಿ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
**
ಅವೈಜ್ಞಾನಿಕ ಹಂಪ್ಸ್‌ಗೆ ಯುವತಿ ಬಲಿ
ತುಮಕೂರು: ತಾಲ್ಲೂಕಿನ ಶೆಟ್ಟಿಹಳ್ಳಿ– ಪಾಲಸಂದ್ರ ರಸ್ತೆಯಲ್ಲಿ ಹಾಕಿರುವ ಅವೈಜ್ಞಾನಿಕ ಹಂಪ್ಸ್‌ಗೆ ಸಾನಿಯಾ (25) ಎಂಬ ಯುವತಿ ಬಲಿಯಾಗಿದ್ದಾಳೆ.
ಶನಿವಾರ ರಾತ್ರಿ ಬೈಕ್‌ನಲ್ಲಿ ಪಾಲಸಂದ್ರ ಕಡೆಯಿಂದ ನಗರದತ್ತ ಬರುತ್ತಿದ್ದು, ರಸ್ತೆಯ ಹಂಪ್ಸ್ ದಾಟುವಾಗ ಬೈಕ್ ಉರುಳಿ ಬಿದಿದ್ದು ಹಿಂಬದಿ ಕುಳಿತಿದ್ದ ಸಾನಿಯಾ ತೀವ್ರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಾವನ್ನಪ್ಪಿದ್ದಾರೆ. ಬಟವಾಡಿ ನಿವಾಸಿಯಾದ ಸಾನಿಯಾ ಪಾಲಸಂದ್ರದ ತಮ್ಮ ಸಂಬಂಧಿಕರ ಮನೆಗೆ ಹೋಗಿ, ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.