ಸೋಮವಾರ, ಅಕ್ಟೋಬರ್ 26, 2020
28 °C

ಪೊಲೀಸ್ ಠಾಣೆಯಲ್ಲಿ ಟಿವಿ ಕದ್ದ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದಲ್ಲಿರುವ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಟಿವಿ ಕಳ್ಳತನ ಮಾಡಿದ ಆರೋಪದ ಮೇಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಾರೇಹಳ್ಳಿಯ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಚೇರಿಯಲ್ಲಿ ರಾತ್ರಿ ವೇಳೆ ಯಾವುದೇ ಸಿಬ್ಬಂದಿ ಇರುವುದಿಲ್ಲ. ‌ಆರೋಪಿಗಳಿಂದ ಜಪ್ತಿ ಮಾಡಿದ್ದ ಆಭರಣಗಳನ್ನು ವಾರಸುದಾರರಿಗೆ ಇತ್ತೀಚೆಗೆ ವಾಪಸ್ ನೀಡಲಾಗಿತ್ತು. ಇದನ್ನು ಗಮನಿಸಿದ ಆರೋಪಿ ಕಚೇರಿಯಲ್ಲಿ ಮತ್ತಷ್ಟು ಆಭರಣಗಳು ಇವೆ ಎಂದು ಕಳ್ಳತನಕ್ಕೆ ಮುಂದಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ಕಳ್ಳತನದ ಆರೋಪದ ಮೇಲೆ ಈ ಹಿಂದೆ ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ‌ಪ್ರಕರಣ ಸಹ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಟಿವಿ ಕಳ್ಳತನಕ್ಕೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು