ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಪರ ಮಂದಕೃಷ್ಣ ಪ್ರಚಾರ

Published 18 ಏಪ್ರಿಲ್ 2024, 15:45 IST
Last Updated 18 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ಪಾವಗಡ: ‘ಮಾದಿಗ ಸಮುದಾಯಕ್ಕೆ ನ್ಯಾಯ ಕಲ್ಪಿಸಿಕೊಟ್ಟವರಿಗೆ ಸಹಕಾರ ನೀಡುವುದು ನಮ್ಮ ಕರ್ತವ್ಯ’ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಮಾದಿಗ ಸಮುದಾಯ ಒಳ ಮೀಸಲಾತಿಗಾಗಿ ಸತತ 30 ವರ್ಷಗಳಿಂದ ಹೋರಾಟ ಮಾಡಿದ್ದೇನೆ. ನಾನು ಯಾವುದೇ ಪಕ್ಷದ ಚಿಹ್ನೆ ಬಳಸಿ ಈವರೆಗೆ ಹೋರಾಟ ಮಾಡಿಲ್ಲ, ಯಾವುದೇ ಪಕ್ಷವನ್ನು ಬೆಂಬಲಿಸಿರಲಿಲ್ಲ. ಆದರೆ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸುವಲ್ಲಿ ಶ್ರಮಿಸಿದ ಬಿಜೆಪಿಗೆ ಈ ಬಾರಿ ಬೆಂಬಲ ನೀಡುವುದು ನನ್ನ ಕರ್ತವ್ಯ’ ಎಂದರು.

ದೇವೇಗೌಡ, ಕುಮಾರಸ್ವಾಮಿ ಅವರೂ ಮೀಸಲಾತಿಗಾಗಿ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ, ಕಾಂಗ್ರೆಸ್ 70 ವರ್ಷಗಳಿಂದ ಯಾವುದೇ ಬದಲಾವಣೆ ಮಾಡಿಲ್ಲ. ತಳ ಸಮುದಾಯದ ಕಾಲೊನಿಗಳಿಗೆ ಕುಡಿಯುವ ನೀರು ಪೂರೈಸಲು ಸಾಧ್ಯವಾಗಿರಲಿಲ್ಲ. ಆದರೆ ಬಿಜೆಪಿ ಸರ್ಕಾರ 10 ವರ್ಷಗಳಲ್ಲಿ ಜಲ ಜೀವನ್ ಮಿಷನ್ ಮೂಲಕ ಕಾಲೊನಿಯ ಮನೆ ಮನೆಗೆ ನೀರು ಹರಿಸಿದ್ದಾರೆ ಎಂದರು.

ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಸಾಕಷ್ಟು ಅನುಭವ ಹೊಂದಿರುವ ಅವರು ಕ್ಷೇತ್ರದ ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಸಿ.ಅಂಜಿನಪ್ಪ, ತಿಮ್ಮಾರೆಡ್ಡಿ, ಎನ್‌.ಎ. ಈರಣ್ಣ, ಗೋವಿಂದಬಾಬು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ರಾಜಶೇಖರ್, ಮಾದಿಗ ದಂಡೋರ ರಾಜ್ಯ ಘಟಕದ ಅದ್ಯಕ್ಷ ಬಿ.ನರಸಪ್ಪ, ರಾಜ್ಯ ವಕ್ತಾರ ಕತ್ತಿ ವೆಂಕಟೇಶ್, ಪಾವಗಡ ಶ್ರೀರಾಮ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ರಂಗಣ್ಣ, ಜಿ.ಟಿ. ಗಿರೀಶ್, ನವೀನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT