ಗುರುವಾರ , ಅಕ್ಟೋಬರ್ 21, 2021
29 °C

ಗಾಂಜಾ ಸಾಗಾಟ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಗಾಂಜಾ ಸಾಗಾಣಿಕೆ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.

ಹಲವು ತಿಂಗಳುಗಳಿಂದ ನಗರದಲ್ಲಿ ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದಿತ್ತು.

ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಕಂತೇನಹಳ್ಳಿ ಗ್ರಾಮದ ರವಿ.ಕೆ.ಎಸ್., ನರಸೀಪುರ ಗ್ರಾಮದ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕಾರ್ಯಚರಣೆಯಲ್ಲಿ ಅಬಕಾರಿ ಉಪ ನೀರಿಕ್ಷಕ ಜಿ.ಆರ್.ನಾಗರಾಜು, ಎಸ್.ಪ್ರಸನ್ನ, ಎಲ್.ಆರ್.ರೇವಣ್ಣ, ಮುಕ್ತಾಸ್, ಚಂದ್ರಶೇಖರ್, ಮಂಜುನಾಥ್, ಉಮೇಶ್ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು