ತಿಪಟೂರು: ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ನೀಡಲಾಗುವ ಪೌಷ್ಟಿಕ ಆಹಾರ ಕಿಟ್ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪದೆ ಇರುವ ಕುರಿತು ದೂರು ಬಂದ ಕಾರಣ ಇಒ ಕಿಟ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಆದೇಶ ಹೊರಡಿಸಿದ್ದಾರೆ.

ಕಿಟ್ ವಿತರಣೆ ಮಾಡುವ ಸಂದರ್ಭದಲ್ಲಿ ಪಿಡಿಒ ಹಾಗೂ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಸಮ್ಮುಖದಲ್ಲಿಯೇ ಕಡ್ಡಾಯವಾಗಿ ವಿತರಣೆ ಮಾಡಬೇಕು ಎಂದು ಸೂಚಿಸಲಾಗಿದೆ.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಸೂಚನಾ ಫಲಕದಲ್ಲಿ ಯಾವ ಗರ್ಭಿಣಿ ಹಾಗೂ ಬಾಣಂತಿಗೆ ಕಿಟ್ ನೀಡಲಾಗಿದೆ ಎಂಬ ಮಾಹಿತಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ನಿರ್ದೇಶನ ನೀಡಲಾಗಿದೆ.

ತಿಪಟೂರು ಇಒ ಎಚ್.ಎಂ.ಸುದರ್ಶನ್ ಮಾತನಾಡಿ, ಗ್ರಾಮಾಂತರ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಿಯಾಗಿ ಕಿಟ್ ವಿತರಣೆ ಆಗುತ್ತಿಲ್ಲ ಎಂಬ ದೂರು ಬಂದಿದೆ. ಸ್ಥಳೀಯ ಭೇಟಿ ಹಾಗೂ ಮಾಸಿಕ ಸಭೆ ಸಂದರ್ಭದಲ್ಲೇ ಈ ವಿಷಯ ಗಮನಿಸಲಾಗಿದೆ. ಸರ್ಕಾರಿ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡುವುದೇ ಈ ಆದೇಶದ ಉದ್ದೇಶ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.