ಸೋಮವಾರ, ಜೂಲೈ 6, 2020
22 °C

ಕಷ್ಟದ ಸಮಯದಲ್ಲಿ ಮಾನವೀಯತೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ದೇಶ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ಯುವ ಸಮೂಹ ಬಡವರ ಪರ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ನಗರದ ಬೀರೇಶ್ವರ ಕನ್ವೆಷನ್ ಹಾಲ್‌ನಲ್ಲಿ ಆರ್.ಆರ್.ಅಭಿಮಾನಿ ಬಳಗವು ಹಮ್ಮಿಕೊಂಡಿರುವ ಆಹಾರ ವಿತರಣಾ ಕಾರ್ಯ ವೀಕ್ಷಿಸಿ ಮಾತನಾಡಿದರು.

ಸಂಕಷ್ಟದ ಸಮಯದಲ್ಲಿ ಮಾನವೀಯತೆ ತೋರುವುದು ಅವಶ್ಯ. ಗುಣಮಟ್ಟದ ಊಟವನ್ನು ಇಲ್ಲಿಂದ ನೀಡಲಾಗುತ್ತಿದೆ ಎಂದರು.

ಆರ್.ಆರ್.ಬಳಗ ಹಾಗೂ ಯುವ ಕಾಂಗ್ರೆಸ್ ಮಾ.26ರಿಂದ ಆರಂಭಿಸಿರುವ ದಾಸೋಹ ಕಾರ್ಯಕ್ಕೆ ಸಿದ್ಧಗಂಗಾ ಮಠವೇ ಪ್ರೇರಣೆಯಾಗಿದೆ. ದಾಸೋಹ ಪ್ರಾರಂಭಕ್ಕೆ ಮಠದಿಂದ ಅಕ್ಕಿ ಕಳುಹಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ನಿರಂತರವಾಗಿ ದಾಸೋಹ ನಡೆಯುತ್ತಿದೆ ಎಂದು ಯುವಕಾಂಗ್ರೆಸ್ ಮುಖಂಡ ಆರ್.ರಾಜೇಂದ್ರ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು