ಶನಿವಾರ, ಜನವರಿ 16, 2021
25 °C

ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಇರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಗುಣಾತ್ಮಕ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣವನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು ಮೂಡಿಸಬೇಕು ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ ಸಲಹೆ ನೀಡಿದರು.

ತಾಲ್ಲೂಕು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕರ ಸಮಸ್ಯೆಗಳ ಏನೇ ಇದ್ದರೂ, ನೇರವಾಗಿ ಚರ್ಚಿಸಬೇಕು. ಶಿಕ್ಷಕರ ಪ್ರತಿ ತಿಂಗಳ ಮಾಸಿಕ ವೇತನ, ಸಾಲ ಸೌಲಭ್ಯ ಸೇರಿದಂತೆ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿ ಕಂಡುಕೊಳ್ಳಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಬೇಕು. ವಿದ್ಯಾರ್ಥಿಗಳಿಗೆ ಗುಣಾತ್ಮಕ ಹಾಗೂ ಪರಿಣಾಮಾತ್ಮಕ ಶಿಕ್ಷಣವನ್ನು ನೀಡಬೇಕು. ಇದರಿಂದ ಪೋಷಕರಿಗೆ ಸರ್ಕಾರಿ ಶಾಲೆಗಳ ಮೇಲೆ ನಂಬಿಕೆ ಇಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಕ್ಷೇತ್ರಶಿಕ್ಷಣಾಧಿಕಾರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಆರ್.ವೆಂಕಟರಾಮಪ್ಪ, ಅಧಿಕಾರಿಗಳು ಪ್ರಮಾಣ ಪತ್ರಗಳನ್ನು ವಿತರಿಸಿದರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಪಿ.ವೆಂಕಟರವಣಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಆರ್.ವೆಂಕಟರಾಮಪ್ಪ, ಶಿಕ್ಷಣ ಸಂಯೋಜಕ ಕೆ.ಬಿ.ಆಂಜನೇಯರೆಡ್ಡಿ, ಬಾಲರಾಜು, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಆರ್.ಹನುಮಂತರೆಡ್ಡಿ, ಪ್ರಧಾನಕಾರ್ಯದರ್ಶಿ ರಂಗಾರೆಡ್ಡಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.