ಗುರುವಾರ , ಜುಲೈ 29, 2021
26 °C

ತುಮಕೂರು: ಗ್ರಾಮ ಸಹಾಯಕರ ಬೇಡಿಕೆ ಈಡೇರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ತುಮಕೂರು: ಗ್ರಾಮ ಸಹಾಯಕರ ಕೆಲಸ ಕಾಯಂಗೊಳಿ ಕನಿಷ್ಠ ವೇತನ ನಿಗದಿಗೊಳಿಸಬೇಕು, ವೈದ್ಯಕೀಯ ಸೌಲಭ್ಯ ನೀಡಬೇಕು, ಕೋವಿಡ್ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಮೂಲಕ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ಗ್ರಾಮಮಟ್ಟದ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮೇಲೆ ಹಲ್ಲೆಗಳು ನಡೆಯುತ್ತಿದ್ದು ಸೂಕ್ತ ಭದ್ರತೆ ಒದಗಿಸಬೇಕು. ಸಹಾಯಕರನ್ನು ತಾಲ್ಲೂಕು ಕಚೇರಿಗಳಲ್ಲಿ ರಾತ್ರಿ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದು, ಸಮಸ್ಯೆ ಪರಿಹರಿಸಬೇಕು. ವಿನಾ ಕಾರಣ ಕೆಲಸದಿಂದ ವಜಾ ಮಾಡುತ್ತಿದ್ದು ಇದನ್ನು ತಡೆಯಬೇಕು ಎಂದು ಕೋರಿದರು.

ಕರ್ನಾಟಕ ಆಡಳಿತ ನ್ಯಾಯಮಂಡಳಿಯು ನಮ್ಮನ್ನು ‘ಡಿ’ ಗ್ರೂಪ್ ನೌಕರರು ಎಂದು ಪರಿಗಣಿಸಲು ಆದೇಶಿಸಿದೆ. ಅಲ್ಲದೆ ಸಚಿವ ಸಂಪುಟ ಉಪಸಮಿತಿಯು ಈ ಹಿಂದೆಯೇ ವರದಿ ಸಲ್ಲಿಸಿದೆ. ಸರ್ಕಾರದ ಉನ್ನತ ಅಧಿಕಾರಿಗಳ ಸಮಿತಿ ಸಹ ಶಿಫಾರಸು ಮಾಡಿದೆ. ಆದರೂ ನಮಗೆ ನ್ಯಾಯ ದೊರೆತಿಲ್ಲ. ಬೇಡಿಕೆಗಳನ್ನು ಒಂದು ವಾರದಲ್ಲಿ ಈಡೇರಿಸದಿದ್ದರೆ ಕೆಲಸ ಸ್ಥಗಿತಗೊಳಿಸಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.