ಗುರುವಾರ , ಜೂನ್ 17, 2021
22 °C

ಬಾಗೇಪಲ್ಲಿಯಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಸಿಐಟಿಯು ನೇತೃತ್ವದಲ್ಲಿ ಬುಧವಾರ ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಸದಸ್ಯರು ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟಿಸಿದರು.

ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ ಮಾತನಾಡಿ, ಬಡ ಮಹಿಳೆಯರಿಗೆ, ವಿಚ್ಛೇದಿತ ಮಹಿಳೆಯರು, ವಿಧವೆಯರು ಬಿಸಿಯೂಟದ ಉದ್ಯೋಗವನ್ನೇ ನಂಬಿದ್ದಾರೆ. 4 ತಿಂಗಳಿಂದ ಆದಾಯ ಇಲ್ಲದೇ ಸಂಕಷ್ಟದಲ್ಲಿ ಇದ್ದಾರೆ. ಶಾಲೆಗಳನ್ನು ಮುಚ್ಚಿರುವುದರಿಂದ ಬಿಸಿಯೂಟ ನೌಕರರೇ ವಿದ್ಯಾರ್ಥಿಗಳ ಮನೆಗಳಿಗೆ ಆಹಾರ ಸಾಮಾಗ್ರಿಗಳನ್ನು ತಲುಪಿಸುತ್ತಿದ್ದಾರೆ. ನೌಕರರಿಗೆ ಏಪ್ರಿಲ್ ತಿಂಗಳಿನಿಂದ ಸಂಬಳ ನೀಡಿಲ್ಲ. ಆರ್ಥಿಕ ಪ್ಯಾಕೇಜ್ ಸಹ ಸರ್ಕಾರ ಘೊಷಣೆ ಮಾಡಿಲ್ಲ. ಇದರಿಂದ ನೌಕರರು ಜೀವನ ಸಾಗಿಸಲು ಕಷ್ಟ ಆಗಿದೆ ಎಂದು ತಿಳಿಸಿದರು.

ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಅಧ್ಯಕ್ಷ ಜಿ.ಮುಸ್ತಾಫ ಮಾತನಾಡಿದರು. ಪ್ರತಿಭಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್.ಮಂಜುನಾಥಸ್ವಾಮಿ ಭೇಟಿ ನೀಡಿ ಮನವಿ ಪಡೆದರು.

ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಅಮರಾವತಿ, ಖಜಾಂಚಿ ರಾಮಾಂಜಿನಮ್ಮ, ರಾಜಮ್ಮ, ಶಾಂತಮ್ಮ, ಅನಿತಾ, ಎ.ರಾಧಮ್ಮ, ಅಲುವೇಲಮ್ಮ, ಸರಿತಾ, ಆದಿಲಕ್ಷ್ಮಮ್ಮ, ಕೆ.ಮಂಗಮ್ಮ, ನಾಗಮಣಿಯಮ್ಮ, ಮುಬೀನಾ, ಎನ್.ರತ್ನಮ್ಮ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.