ತುಮಕೂರು: ಹಾಲು ಮಾರಾಟ ಬೆಲೆಯನ್ನು ಪ್ರತಿ ಲೀಟರ್‌ಗೆ ₹3 ಹೆಚ್ಚಳ ಮಾಡಿದ್ದು, ಈ ಹಣವನ್ನು ರೈತರಿಗೆ ವರ್ಗಾಯಿಸಲು ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ನಿರ್ಧರಿಸಿದೆ. ಇದರಿಂದಾಗಿ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗಲಿದೆ.

ತುಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿನ ಬೆಲೆ 35.78ಕ್ಕೆ ಹೆಚ್ಚಳವಾದಂತಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಲೀಟರ್‌ಗೆ ₹36.71 ನೀಡಲಾಗುತ್ತದೆ.

ಜಿಲ್ಲೆಯಲ್ಲಿ 1,338 ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಪ್ರತಿ ದಿನ 8.50 ಲಕ್ಷ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದೆ. ಹವಾಮಾನ ವೈಪರೀತ್ಯ, ಮಳೆ ಕೊರತೆ ಮತ್ತಿತರ ಕಾರಣಗಳಿಂದ ಹಸುಗಳಿಗೆ ಮೇವಿನ ಕೊರತೆ ಉಂಟಾಗಿದ್ದು, ಹಾಲು ಉತ್ಪಾದನೆ ಕಡಿಮೆಯಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಉತ್ಪಾದನೆ ಹೆಚ್ಚಳವಾಗುತ್ತಿಲ್ಲ ಎಂದು ತುಮುಲ್ ಅಧ್ಯಕ್ಷ ಮಹಲಿಂಗಯ್ಯ ತಿಳಿಸಿದ್ದಾರೆ.

ಹಾಲು ಉತ್ಪಾದನೆಯಲ್ಲಿ ಕುಸಿತ ಹಾಗೂ ಸರ್ಕಾರದ ನಿರ್ಧಾರದಂತೆ ಗ್ರಾಹಕರಿಗೆ ಹಾಲು ಮಾರಾಟ ದರ ಹೆಚ್ಚಳ ಮಾಡಲಾಗಿದೆ. ಪೂರ್ಣ ಮೊತ್ತವನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.