ಪಾವಗಡ: ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಿರುವ ತಾಲ್ಲೂಕಿನ ಗಡಿ ಗ್ರಾಮಗಳಲ್ಲಿ ಹಸುಗಳಿಗೆ ಚರ್ಮಗಂಟು ರೋಗಬಾಧೆ ವ್ಯಾಪಕವಾದ ಕಾರಣ ಹಾಲಿನ ಉತ್ಪಾದನೆ ಗಣನೀಯವಾಗಿ ಕುಸಿಯುತ್ತಿದೆ.

ಚರ್ಮಗಂಟು ರೋಗ ಕಾಣಿಸಿಕೊಂಡ ಜಾನುವಾರಗಳಿಂದ ವೈರಾಣು ಸೋಂಕು ಅಕ್ಕಪಕ್ಕದ ಜಾನುವಾರುಗಳಿಗೂ ತ್ವರಿತಗತಿಯಲ್ಲಿ ಹಬ್ಬುತ್ತಿದ್ದು, ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಬೆಳವಣಿಗೆ ಹೈನುಗಾರಿಕೆಯಲ್ಲಿ ತೊಡಗಿರುವ ರೈತರನ್ನು ಚಿಂತೆಗೀಡುಮಾಡಿದೆ.

ಆಂಧ್ರ ಗಡಿಯಲ್ಲಿರುವ ಪಳವಳ್ಳಿ, ವೆಂಕಟಮ್ಮನಹಳ್ಳಿ, ತಿರುಮಣಿ, ನಾಗಲಮಡಿಕೆ, ಬೊಮ್ಮತನಹಳ್ಳಿ, ಕೊಡಮಡುಗು ಸೇರಿದಂತೆ ಹಲವು ಗ್ರಾಮಗಳಲ್ಲಿಶುಷ್ಕ ವಾತಾವರಣದಿಂದ ಸೋಂಕು ವೇಗವಾಗಿ ಹರಡುತ್ತಿದೆ.

ರೈತರು ರೋಗ ಕಾಣಿಸಿಕೊಂಡ ಆರಂಭದಲ್ಲಿಯೇ ಚಿಕಿತ್ಸೆ ಕೊಡಿಸಿದಲ್ಲಿ ರೋಗವನ್ನು ನಿಯಂತ್ರಿಸಬಹುದು. ಇಲ್ಲವಾದಲ್ಲಿ ಇಡೀ ಮೈ ಗಾಯಗಳಾಗಿ ಜಾನುವಾರುಗಳ ಬೆಳವಣಿಗೆ ಕುಂಠಿತವಾಗುತ್ತದೆ. ಹಾಲು ಉತ್ಪಾದನೆಯ ಮೇಲೆಯೂ ಪರಿಣಾಮ ಬೀರುತ್ತದೆ’ ಎನ್ನುತ್ತಾರೆ ಪಶು ಇಲಾಖೆ ವೈದ್ಯರು.

‘ವೈರಸ್‌ನಿಂದ ಹಬ್ಬುವ ರೋಗದಿಂದ ಪ್ರಾಣಹಾನಿ ಸಂಭವಿಸುವುದಿಲ್ಲ. ಸಕಾಲಕ್ಕೆ ಚಿಕಿತ್ಸೆ ಕೊಡಿಸಿದಲ್ಲಿ ರೋಗವನ್ನು ಸುಲಭವಾಗಿ ಹತೋಟಿಗೆ ತರಬಹುದು’ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಸಿದ್ದಗಂಗಯ್ಯ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.