ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರ; ನಾಳೆಯಿಂದ ಪರಿಶೀಲನೆ

ಲಾಕ್‌ಡೌನ್ ಅವಧಿ; ಜಿಲ್ಲೆಯಲ್ಲಿ ಐದು ಪಡಿತರ ಅಂಗಡಿಗಳ ಅಮಾನತು
Last Updated 6 ಜೂನ್ 2020, 15:35 IST
ಅಕ್ಷರ ಗಾತ್ರ

ತುಮಕೂರು: ‘ಪಡಿತರ ವಿತರಣೆ ಹಾಗೂ ಗುಣಮಟ್ಟ ಪರಿಶೀಲಿಸುವ ಉದ್ದೇಶದಿಂದ ಗೋದಾಮುಗಳಿಗೆ ಭೇಟಿ ನೀಡುತ್ತಿದ್ದೇನೆ. ಜೂನ್ 8ರ ನಂತರ ನನ್ನನ್ನೂ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳ 5 ತಂಡಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳಲಿವೆ. ಪಡಿತರ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎನ್ನುವ ಬಗ್ಗೆ ಪರಿಶೀಲಿಸಲಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ 20 ದಿನಗಳಲ್ಲಿ ಪೊಲೀಸ್, ಕಂದಾಯ, ಆಹಾರ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ದಾಸ್ತಾನಿಟ್ಟ 4 ಸಾವಿರ ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಅಕ್ಕಿ ಸಾಗಿಸಿದ ಲಾರಿಗಳನ್ನೂ ವಶಕ್ಕೆ ಪಡೆಯಲಾಗಿದೆ. ಯಾವುದೇ ಅಂಗಡಿಗಳಲ್ಲಿ ಸೂಕ್ತ ದಾಖಲೆ, ರಸೀದಿ ಇಲ್ಲದೆ ಅಕ್ಕಿ ಹಾಗೂ ಪಡಿತರ ಧಾನ್ಯಗಳನ್ನು ಶೇಖರಿಸಿದ್ದರೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ಪಡಿತರ ವಿತರಣೆಯಲ್ಲಿ ವ್ಯತ್ಯಾಸ ಕಂಡುಬಂದರೆ ಗ್ರಾಹಕರು ಇಲಾಖೆಯ ಸಹಾಯವಾಣಿ 1967ಕ್ಕೆ ದೂರು ನೀಡಬೇಕು. ಪ್ರತಿದಿನ ಸಹಾಯವಾಣಿಗೆ ಸುಮಾರು 250 ದೂರು ಕರೆಗಳು ಬರುತ್ತಿವೆ. ಸ್ವೀಕರಿಸಿದ ದೂರುಗಳಿಗೆ ತಕ್ಷಣವೇ ಸ್ಪಂದಿಸಲಾಗುತ್ತಿದೆ ಎಂದು ಹೇಳಿದರು.

ನಿಗದಿಯಂತೆ ಯಾವುದೇ ಜಿಲ್ಲೆಗೆ ಭೇಟಿ ನೀಡುವ ಕಾರ್ಯಕ್ರಮಕ್ಕೆ ತೆರಳುವಾಗ ಮಾರ್ಗ ಮಧ್ಯೆ ಸಿಗುವ ಪಡಿತರ ಅಂಗಡಿ, ಗೋದಾಮುಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ ಎಂದರು.

ಲಾಕ್‍ಡೌನ್ ಸಂದರ್ಭದಲ್ಲಿ ಸಮರ್ಪಕ ಸೇವೆ ಒದಗಿಸದ ಜಿಲ್ಲೆಯ 5 ಪಡಿತರ ಅಂಗಡಿಗಳನ್ನು ಅಮಾನತಿನಲ್ಲಿಡಲಾಗಿದೆ ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸಯ್ಯ ಅವರು ಸಚಿವರ ಗಮನಕ್ಕೆ ತಂದರು.

ಬಿಜೆಪಿ ಮುಖಂಡ ಸೊಗಡು ಶಿವಣ್ಣ ಇದ್ದರು.

ಗೋದಾಮು ನಿರ್ವಹಣೆಗೆ ಮೆಚ್ಚುಗೆ: ನಂತರ ಸಚಿವರು ಶಿರಾಗೇಟ್ ಹಾಗೂ ಶಿರಾ ತಾಲ್ಲೂಕಿನಲ್ಲಿರುವ ಕೆಎಫ್‍ಸಿಸಿ ಗೋದಾಮುಗಳಿಗೆ ಭೇಟಿನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT