ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಯುವ ವಯಸ್ಸಿನಲ್ಲಿ ದೇವೇಗೌಡರಿಗೆ ಹೊಂದಾಣಿಕೆ ಬೇಕಿತ್ತಾ?: ಸಚಿವ ಕೆ.ಎನ್.ರಾಜಣ್ಣ

Published 5 ಏಪ್ರಿಲ್ 2024, 5:29 IST
Last Updated 5 ಏಪ್ರಿಲ್ 2024, 5:29 IST
ಅಕ್ಷರ ಗಾತ್ರ

ತುಮಕೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಾಯುವ ವಯಸ್ಸಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಾಗ್ದಾಳಿ ನಡೆಸಿದರು.

ನಗರದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸುವ ಸಂರ್ಭದಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಅವರು ಮಾತನಾಡಿದರು.

ದೇವೇಗೌಡರಿಗೆ ಸಾಯುವ ವಯಸ್ಸಾಗಿದೆ. ಜೀವನದ ಅಂತ್ಯ ಕಾಲದಲ್ಲಿ ಇಂತಹ ಹೊಂದಾಣಿಕೆ ಬೇಕಿತ್ತೇ ಎಂದು ರಾಜಣ್ಣ ಕೇಳಿದರು.

‘ಕಳೆದ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದವರನ್ನು ಸೋಲಿಸಿ’ ಎಂದು ದೇವೇಗೌಡರು ತಮ್ಮ ಅಕ್ಕಪಕ್ಕ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಸಂಸದ ಜಿ.ಎಸ್.ಬಸವರಾಜು ಅವರನ್ನು ಕೂರಿಸಿಕೊಂಡು ಹೇಳುತ್ತಿದ್ದಾರೆ. ಕಳೆದ ಬಾರಿ ಅವರನ್ನು ಸೋಲಿಸಿದವರು ಪಕ್ಕದಲ್ಲೇ ಇರಬೇಕಾದರೆ, ಇನ್ನು ಮತದಾರರು ಯಾರನ್ನು ಸೋಲಿಸಬೇಕು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT