ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ: ಬಾಲಕರ ವಸತಿ ನಿಲಯ ಪರಿಶೀಲಿಸಿದ ಸಚಿವ ರಾಜಣ್ಣ

Published 31 ಜನವರಿ 2024, 15:32 IST
Last Updated 31 ಜನವರಿ 2024, 15:32 IST
ಅಕ್ಷರ ಗಾತ್ರ

ಮಧುಗಿರಿ: ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ವಸತಿ ನಿಲಯದ ಆವರಣದ ಪರಿಸರ, ಅಡುಗೆ ಕೋಣೆ, ಊಟ, ವಿಶ್ರಾಂತಿ ಕೋಣೆ, ಶೌಚಾಲಯ ಸೇರಿದಂತೆ ಮೂಲ ಸೌಕರ್ಯ ಪರಿಶೀಲಿಸಿದರು.

ವಿದ್ಯಾರ್ಥಿನಿಲಯದ ಚಾವಣಿ, ಕೊಠಡಿ ಮತ್ತು ಬಣ್ಣ ಬಳಿಯಲು ಅನುದಾನ ನೀಡಲಾಗುವುದು. ತಾಲ್ಲೂಕಿನ ಎಲ್ಲ ವಸತಿ ನಿಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು. ಕೊರತೆಗಳ ಪಟ್ಟಿ ನೀಡಿ ಎಂದರು.

ಎಲ್ಲ ಹಾಸ್ಟೆಲ್‌ಗಳಲ್ಲಿಯೂ ಮೆನು ಪ್ರಕಾರ ಊಟ ನೀಡಬೇಕು. ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರು.

ವಿದ್ಯಾರ್ಥಿನಿಲಯ ಮುಂಭಾಗದ ಚರಂಡಿಯಲ್ಲಿ ಕೊಳಚೆ ನೀರು ಕಟ್ಟಿ, ದುರ್ವಾಸನೆ ಬೀರುತ್ತಿರುವುದನ್ನು ಗಮನಿಸಿದ ಸಚಿವರು ಸ್ಥಳಕ್ಕೆ ಪುರಸಭೆ ಆರೋಗ್ಯ ನಿರೀಕ್ಷಕ ಬಾಲಾಜಿ ಅವರನ್ನು ಕರೆಸಿ ತಕ್ಷಣ ಸ್ವಚ್ಛಗೊಳಿಸುವಂತೆ ಸೂಚಿಸಿದರು.

ವಿದ್ಯಾರ್ಥಿಯೊಬ್ಬನ ಕೈಯಲ್ಲಿ ಫಂಗಸ್ ಗುಳ್ಳೆಗಳಾಗಿರುವುದನ್ನು ಕಂಡ ಸಚಿವರು ಸ್ಥಳಕ್ಕೆ ಟಿಎಚ್‌ಒ ಶ್ರೀನಿವಾಸ್ ಅವರನ್ನು ಕರೆಸಿ, ನಿರಂತರ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಿವಣ್ಣ, ತಾ.ಪಂ ಲಕ್ಷ್ಮಣ್, ಎಡಿಒ ಮಧುಸೂಧನ್, ಪುರಸಭೆ ಮಾಜಿ ಅಧ್ಯಕ್ಷ ಎನ್. ಗಂಗಣ್ಣ, ಎಂ.ಕೆ. ನಂಜುಂಡಯ್ಯ, ಪಿಡಬ್ಲೂಡಿ ಇಇ ಸುರೇಶ್ ರೆಡ್ಡಿ, ಎಇಇ ರಾಜಗೋಪಾಲ್, ದಸಾಪ ತಾಲ್ಲೂಕು ಅಧ್ಯಕ್ಷ ಮಹಾರಾಜು, ಸಹಾಯಕ ನಿಲಯ ಪಾಲಕ ಚಿಕ್ಕರಂಗಪ್ಪ, ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT