ತುಮಕೂರು: ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಸೆ. 7ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪಾವಗಡ ತಾಲ್ಲೂಕು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ಲೋಕಾರ್ಪಣೆ, ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ 11 ಗಂಟೆಗೆ ಪಳವಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ, ಮಧ್ಯಾಹ್ನ 12.30ಕ್ಕೆ ಮಧುಗಿರಿ ತಾಲ್ಲೂಕು ಸೊಂದೇನಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ಲೋಕಾರ್ಪಣೆ, ಮಧ್ಯಾಹ್ನ 2 ಗಂಟೆಗೆ ಶಿರಾ ನಗರದ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ ಮಾಡಲಿದ್ದಾರೆ.

ಸಂಜೆ 4 ಗಂಟೆಗೆ ತುಮಕೂರು ಕ್ಯಾತ್ಸಂದ್ರದಲ್ಲಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಸಂಜೆ 4.15ಕ್ಕೆ ಮರಳೂರಿನಲ್ಲಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, 4.30ಕ್ಕೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಉದ್ಘಾಟಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.