ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರಿಗೆ ತರಾಟೆ ತೆಗೆದುಕೊಂಡ ಸಚಿವರು

Last Updated 21 ಮೇ 2021, 4:20 IST
ಅಕ್ಷರ ಗಾತ್ರ

ಶಿರಾ: ನಗರದ ಕೋವಿಡ್ ಆಸ್ಪತ್ರೆಗೆ ಗುರುವಾರ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ದಿಢೀರ್ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದರು.

ಕೋವಿಡ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯ ಬಗ್ಗೆ ಕುಪಿತರಾದ ಸಚಿವರು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ರೋಗಿಗಳಿಗೆ ಸ್ವಂದಿಸುತ್ತಿಲ್ಲ. ಅವರನ್ನು ಮುಟ್ಟುವುದು ಇಲ್ಲ ಕಾಟಾಚಾರಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬದವರೇ ಊಟ, ತಿಂಡಿ ತಂದು ಕೊಡುವ ಸ್ಥಿತಿ ಇದೆ ಎಂದು ವೈದ್ಯರ ಗಮನಕ್ಕೆ ತರಲಾಯಿತು.

ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳ ಜೊತೆ ಅವರ ಕುಟುಂಬದವರು ಇರುವುದನ್ನು ನೋಡಿದ ಸಚಿವರು ಕೋವಿಡ್ ವಾರ್ಡ್‌ನಲ್ಲಿ ಬೇರೆಯವರಿಗೆ ಇರಲು ಏಕೆ ಅವಕಾಶ ನೀಡಲಾಗಿದೆ ಇದರಿಂದ ರೋಗ ಉಲ್ಬಣವಾಗಲು ಕಾರಣವಾಗುವುದು ಎಂದು ತರಾಟೆಗೆ ತೆಗೆದುಕೊಂಡರು.

‘ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳಿಗೆ ತಲಾ ಒಂದು ಗಂಟೆಯಂತೆ ಆಮ್ಲಜನಕ ನೀಡಲಾಗುತ್ತಿದೆ ಇದರಿಂದ ರೋಗಿಗಳಿಗೆ ತೊಂದರೆಯಾಗುವುದು’ ಎಂದು ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ ಹೇಳಿದಾಗ ಜಿಲ್ಲೆಯಲ್ಲಿ ಎಲ್ಲೂ ಆಮ್ಲಜನಕದ ತೊಂದರೆ ಇಲ್ಲ. ಯಾವ ರೋಗಿಗೆ ಎಷ್ಟು ಆಮ್ಲಜನಕ ಕೊಡಬೇಕು ಎನ್ನುವುದನ್ನು ವೈದ್ಯರು ತೀರ್ಮಾನಿಸುತ್ತಾರೆ ಎಂದರು.

ಇಷ್ಟವಿಲ್ಲದಿದ್ದರೆ ಬಿಟ್ಟು ಹೋಗಿ: ಆಸ್ಪತ್ರೆಯನ್ನು ಯಾರು ಉಸ್ತುವಾರಿ ವಹಿಸಿಕೊಂಡು ಪರಿಶೀಲಿಸುತ್ತಿದ್ದೀರಿ ಎಂದು ಆರೋಗ್ಯ ಸಚಿವರು ಕೇಳಿದಾಗ ತಹಶೀಲ್ದಾರ್ ಮಮತಾ ಪ್ರತಿಕ್ರಿಯಿಸಿ, ಜಿಲ್ಲಾಧಿಕಾರಿ ಸೂಚನೆಯಂತೆ ನಿತ್ಯ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಹಿಂದೆ ರಾತ್ರಿ ಸಮಯದಲ್ಲಿ ರೋಗಿಗಳು ತಮಗೆ ಬೇಕಾದಷ್ಟು ಆಮ್ಲಜನಕವನ್ನು ಅವರೇ ಹೆಚ್ಚಿಗೆ ಮಾಡಿಕೊಳ್ಳುತ್ತಿದ್ದರು ಇದರಿಂದ ಬೇಗ ಆಮ್ಲಜನಕ ಮುಗಿಯುತ್ತಿತ್ತು ಎಂದರು. ಇದರಿಂದ ಬೇಸರಗೊಂಡ ಸಚಿವರು ವೈದ್ಯರನ್ನು ತರಾಟೆಗೆ ತೆಗೆದುಕೊಂಡು ‘ನಿಮಗೆ ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ಕೆಲಸ ಬಿಟ್ಟು ಹೋಗಿ’ ಎಂದು ಖಾರವಾಗಿ ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ.ಗೌಡ, ಅಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಎಳೆ ಎಳೆಯಾಗಿ ಸಚಿವರ ಗಮನಕ್ಕೆ ತಂದರು. ಆಸ್ಪತ್ರೆಯಲ್ಲಿ‌ ರೋಗಿಗಳು ಒಬ್ಬರ ಮೇಲೆ ಒಬ್ಬರು ಬೀಳುತ್ತಿದ್ದರು ಸಹ ಯಾರು ಈ ಬಗ್ಗೆ ಗಮನಹರಿಸುತ್ತಿಲ್ಲ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ, ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ.ಗೌಡ, ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗೇಂದ್ರಪ್ಪ, ತಹಶೀಲ್ದಾರ್ ಎಂ.ಮಮತ, ಡಾ.ಶ್ರೀನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT