ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕಿಡಿಗೇಡಿಗಳು 450ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ಕತ್ತರಿಸಿ ಹಾಕಿದ್ದಾರೆ.
ಗ್ರಾಮದ ರೈತ ಮಹೇಶ್ ಸಾಲಮಾಡಿ ಕಳೆದ ಮೂರು ತಿಂಗಳ ಹಿಂದೆ ಅಡಿಕೆ ಸಸಿಗಳನ್ನು ನೆಟ್ಟು, ಹನಿ ನೀರಾವರಿ ವ್ಯವಸ್ಥೆ ಮಾಡಿದ್ದರು.
ರೈತ ಮಹೇಶ್ ಪ್ರತಿಕ್ರಿಯಿಸಿ, ‘ಕಳೆದ ಮೂರು ತಿಂಗಳ ಹಿಂದೆ ಅಡಿಕೆ ಸಸಿ ನಡೆಲಾಗಿತ್ತು.ಇದಕ್ಕಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಕಳೆದ ರಾತ್ರಿ ದುಷ್ಕರ್ಮಿಗಳು ಅಡಿಕೆ ಸಸಿ ಕಡಿದು ಹಾಕಿದ್ದಾರೆ‘ ಎಂದರು.
ಗ್ರಾಮದ ಶಂಕರ್ ಮಾತನಾಡಿ, ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.