ತುಮಕೂರು: ನಗರದ ಉಪ್ಪಾರಹಳ್ಳಿ ಗೇಟಿನಿಂದ ತುಮಕೂರು ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆ ದುರಸ್ತಿ ಕಾರ್ಯ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಡಿ.13ರಿಂದ ಈ ರಸ್ತೆಯಲ್ಲಿ ಸಂಚಾರ ಬಂದ್ ಆಗಲಿದೆ.

ತುಮಕೂರು–ಬೆಂಗಳೂರು ರೈಲ್ವೆ ಪ್ರಯಾಣಿಕರ ವೇದಿಕೆ ಪದಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಬಿ.ಜಿ.ಜ್ಯೋತಿ ಗಣೇಶ್, ‘ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ದುರಸ್ತಿ ಕಾಮಗಾರಿಗೆ ಚಾಲನೆ ದೊರೆತಿದೆ. ಸ್ಮಾರ್ಟ್‍ಸಿಟಿ ಯೋಜನೆ ಹಾಗೂ ಮಹಾನಗರ ಪಾಲಿಕೆಯಿಂದ ಕಾಮಗಾರಿ ನಡೆಯಲಿದೆ’ ಎಂದರು.

ಹತ್ತು ದಿನಗಳಲ್ಲಿ ದುರಸ್ತಿ ಕಾರ್ಯ ಮುಗಿಯಲಿದೆ. ಡಿ.13ರಿಂದ ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗುತ್ತದೆ. ರಸ್ತೆಯನ್ನು ಬಳಸುತ್ತಿದ್ದ ವಾಹನ ಸವಾರರು, ಅದರಲ್ಲೂ ವಿಶೇಷವಾಗಿ ರೈಲ್ವೆ ಪ್ರಯಾಣಿಕರು ಬದಲಿ ರಸ್ತೆ ಬಳಸುವ ಮೂಲಕ ಸಹಕರಿಸಬೇಕು ಎಂದು ಕೋರಿದರು.

ಗಾಂಧಿನಗರ ವಾರ್ಡ್ ಸದಸ್ಯೆ ಗಿರಿಜಾ ಧನಿಯಾಕುಮಾರ್ ಇದ್ದರು.

ಕಳೆದ ಆಗಸ್ಟ್‌ನಲ್ಲಿ ವತಿಯಿಂದ ನಡೆದಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕರಲ್ಲಿ ವೇದಿಕೆ ಪದಾಧಿಕಾರಿಗಳು ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.