ಚಿಕ್ಕನಾಯಕನಹಳ್ಳಿ: ಗುಣಮಟ್ಟದ ಆಹಾರ, ವಸತಿ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಶಾಸಕ ಸಿ.ಬಿ.ಸುರೇಶ್ ಬಾಬು ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸೋಮವಾರ ದಿಢೀರ್ ಭೇಟಿ ನೀಡಿದರು.

ಅಡುಗೆ ಕೋಣೆ, ಗ್ರಂಥಾಲಯ ಸೇರಿದಂತೆ ವಿದ್ಯಾರ್ಥಿನಿಲಯವನ್ನು ವೀಕ್ಷಿಸಿದ ಶಾಸಕರು ಸರ್ಕಾರ ಬಡವರಿಗಾಗಿ ವಸತಿ ಶಾಲೆಗಳನ್ನು ತೆರೆದಿದೆ. ಇಂತಹ ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಊಟ ಹಾಗೂ ವಸತಿಯನ್ನು ಹೊಂದಿದ್ದು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ತಹಶೀಲ್ದಾರ್ ಪುರಂದರ ಮಾತನಾಡಿ, ಹಾಸ್ಟೆಲ್ನಲ್ಲಿ ಸ್ವಚ್ಛತೆಗೆ ಅದ್ಯತೆ ನೀಡಿ ಮಕ್ಕಳ ಆರೋಗ್ಯದ ಕಡೆ ಗಮನ ನೀಡಬೇಕು. ಇರುವ ವ್ಯವಸ್ಥೆಯನ್ನು ಬಳಸಿಕೊಂಡು ಹೊಂದಿಕೊಂಡು ಹೋಗಬೇಕು. ವಸತಿ ನಿಲಯವನ್ನು ಮನೆ ಎಂದು ಭಾವಿಸಿ ಸ್ವಚ್ಛವಾಗಿರಿಸಿಕೊಳ್ಳಿ ಎಂದು ಸಲಹೆ ನೀಡಿದರು

ವಿದ್ಯಾರ್ಥಿಗಳು ಉಚಿತ ಸಿಇಟಿ ತರಬೇತಿ ನೀಡುವಂತೆ ಪದವಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸುವುದಾಗಿ ಶಾಸಕರು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.