ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌: ಜ್ಯೋತಿಗಣೇಶ್‌ ವಿರೋಧ

Published 15 ಮೇ 2024, 4:30 IST
Last Updated 15 ಮೇ 2024, 4:30 IST
ಅಕ್ಷರ ಗಾತ್ರ

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ (ಕುಣಿಗಲ್– ಮಾಗಡಿ ಮಾರ್ಗ) ಕಾಮಗಾರಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಯೋಜನೆ ಜಿಲ್ಲೆಯ ರೈತರು, ಸಾರ್ವಜನಿಕರ ಮರಣ ಶಾಸನವಾಗಲಿದೆ ಎಂದಿದ್ದಾರೆ.

ಜಿಲ್ಲೆಗೆ ನಿಗದಿಯಾಗಿದ್ದ ಹೇಮಾವತಿ ನೀರಿನ ಪ್ರಮಾಣ 24.08 ಟಿಎಂಸಿ ಪಡೆಯಲು ಇದುವರೆಗೆ ಸಾಧ್ಯವಾಗಿಲ್ಲ. 2019ರಲ್ಲಿ ಎಕ್ಸ್‌ಪ್ರೆಸ್‌ ಕೆನಾಲ್‌ ಮುಖಾಂತರ ನೀರು ತಗೆದುಕೊಂಡು ಹೋಗುವುದನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಡೆದಿದ್ದರು. ಹೇಮಾವತಿ ನಾಲಾ ಆಧುನೀಕರಣಕ್ಕೆ ಸಾವಿರಾರು ಕೋಟಿ ಅನುದಾನ ನೀಡಿದ್ದರು ಎಂದು ಸ್ಮರಿಸಿದ್ದಾರೆ.

ನಾಲಾ ಆಧುನೀಕರಣ ಕಾಮಗಾರಿಯು ಭಾಗಶಃ ಪೂರ್ಣಗೊಂಡಿದೆ. ಇಂತಹ ಸಮಯದಲ್ಲಿ ದುರುದ್ದೇಶದಿಂದ ಎಕ್ಸ್‌ಪ್ರೆಸ್‌ ಕೆನಾಲ್‌ ಕಾಮಗಾರಿ ಕೈಗೊಂಡಿದ್ದಾರೆ. ಯಾವುದೇ ಕಾರಣಕ್ಕೂ ಈ ಕಾಮಗಾರಿ ಪೂರ್ಣಗೊಳ್ಳಲು ಬಿಡುವುದಿಲ್ಲ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ, ವಿವಿಧ ಸಂಘಟನೆಗಳ ಪಕ್ಷಾತೀತ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗುವುದು ನಮ್ಮ ಕರ್ತವ್ಯ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT