ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಿ: ಶಾಸಕ ಎಚ್.ವಿ ವೆಂಕಟೇಶ್

Published 25 ಫೆಬ್ರುವರಿ 2024, 13:59 IST
Last Updated 25 ಫೆಬ್ರುವರಿ 2024, 13:59 IST
ಅಕ್ಷರ ಗಾತ್ರ

ಪಾವಗಡ: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶನಿವಾರ ರಾತ್ರಿ ಶಾಸಕ ಎಚ್.ವಿ ವೆಂಕಟೇಶ್ ಭೇಟಿ ನೀಡಿ ಆಸ್ಪತ್ರೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

‘ಆಸ್ಪತ್ರೆಯನ್ನು ಶುಚಿಯಾಗಿಟ್ಟುಕೊಂಡಿಲ್ಲ. ರೋಗಿಗಳೊಂದಿಗೆ ಸಿಬ್ಬಂದಿ, ವೈದ್ಯರು ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಇಂತಹ ದೂರುಗಳು ಮರುಕಳಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

‘ಆಸ್ಪತ್ರೆಗೆ ಬರುವ ರೋಗಿಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಚಿಕಿತ್ಸೆ ನೀಡಬೇಕು. ಅವರ ಮೇಲೆ ಸಿಡಿಮಿಡಿಗೊಳ್ಳದೆ ಪ್ರಾಮಾಣಿಕವಾಗಿ ಅವರಿಗೆ ಸೇವೆ ಸಲ್ಲಿಸಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಸಹಿಸುವುದಿಲ್ಲ. ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡ, ಯಂತ್ರೋಪಕರಣಗಳನ್ನು ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಭಾಗದಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದು ವೈದ್ಯಾಧಿಕಾರಿ ಡಾ.ಕಿರಣ್ ಅವರಿಗೆ ಸೂಚಿಸಿದರು.

ಆಸ್ಪತ್ರೆಯಲ್ಲಿದ್ದ ರೋಗಿಗಳ ಸಮಸ್ಯೆಗಳನ್ನು ಆಲಿಸಿದರು. ವೈದ್ಯರು, ಸಿಬ್ಬಂದಿ ಸ್ಪಂದಿಸುತ್ತಿದ್ದಾರೆಯೇ ಎಂದು ಮಾಹಿತಿ ಪಡೆದರು.

ಪುರಸಭೆ ಸದಸ್ಯ ರವಿ, ರಾಜೇಶ್, ಮಾಜಿ ಅಧ್ಯಕ್ಷ ಶಂಕರರೆಡ್ಡಿ, ನಾಗೇಂದ್ರರಾವ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT