ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಪಾಪನಾಕೋಣ ಗ್ರಾಮದಲ್ಲಿ ಶನಿವಾರ ಕೃಷಿ ಇಲಾಖೆಯಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಕಾರ್ಯಕ್ರಮದಡಿ ಶಾಸಕ ಸುರೇಶ್ ಬಾಬು ನೇಗಿಲ ಹಿಡಿದು ಉಳುಮೆ ಮಾಡಿ, ಬಿತ್ತನೆ ಮಾಡುವುದರ ಮೂಲಕ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಬಿತ್ತನೆ ಬೀಜ ಹಾಗೂ ಗೊಬ್ಬರ ಬೇಡಿಕೆಗೆ ತಕ್ಕಂತೆ ಪೂರೈಕೆ ಆಗುತ್ತಿದೆ. ಇಲಾಖೆಯ ಗುಣಮಟ್ಟದ ಬಿತ್ತನೆ ಬೀಜ ಪಡೆದು ಕೃಷಿಯಲ್ಲಿ ಉತ್ತಮ ಬೆಳೆ ಪಡೆಯಿರಿ. ಈಗಾಗಲೇ ಪಾಪನಕೋಣ ಗ್ರಾಮದಲ್ಲಿ ಪ್ರಾಯೋಗಿಕವಾಗಿ ವಿತರಣೆ ಮಾಡುತ್ತಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್ ಮಾತನಾಡಿ, ಬಿತ್ತನೆ ಕಾಲ ಇದಾಗಿದ್ದು ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ನೀಡಬೇಕಾಗಿರುವುದು ನಮ್ಮ ಜವಾಬ್ದಾರಿ. ನಮ್ಮಲ್ಲಿ ಅಲಸಂದೆ, ತೊಗರಿ, ಹೆಸರುಕಾಳು ಬಿತ್ತನೆ ಬೀಜಗಳ ದಸ್ತಾನು ಇದೆ ಎಂದರು.

ಬೆಳಗುಲಿ ಗ್ರಾ.ಪಂ. ಸದಸ್ಯರುಗಳಾದ ರಾಮಣ್ಣ, ರಂಜಿತಾ, ಕ್ಯಾತಪ್ಪ, ಪಿಎಲ್ ಡಿ ಬ್ಯಾಂಕ್ ನ ಸದಸ್ಯ ರಂಗಪ್ಪ, ಗುಡಿಗೌಡ ನಾಗರಾಜು ಹಾಗೂ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.