ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಬಂದ್‌ ಬೆಂಬಲಿಸಲು ಶಾಸಕರ ಮನವಿ

Published 24 ಜೂನ್ 2024, 7:16 IST
Last Updated 24 ಜೂನ್ 2024, 7:16 IST
ಅಕ್ಷರ ಗಾತ್ರ

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಜೂನ್‌ 25ರಂದು ನಡೆಯುವ ಜಿಲ್ಲಾ ಬಂದ್‌ಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಬೆಂಬಲ ಸೂಚಿಸಿದ್ದಾರೆ. ಜಿಲ್ಲೆಯ ಸಾರ್ವಜನಿಕರು, ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಬಂದ್‌ನಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಎಕ್ಸ್‌ಪ್ರೆಸ್‌ ಕೆನಾಲ್‌ ಕಾಮಗಾರಿ ಮುಂದುವರಿಸಬಾರದು. ನಗರ ಅಭಿವೃದ್ಧಿಯತ್ತ ಸಾಗುತ್ತಿದ್ದು, ಜನಸಂಖ್ಯೆ ಏರಿಕೆಯಾಗುತ್ತಿದೆ. ನೀರಿಗೆ ಬೇಡಿಕೆ ಹೆಚ್ಚಿರುವ ಸಮಯದಲ್ಲಿ ಹೇಮಾವತಿ ನೀರನ್ನು ಮಾಗಡಿ, ರಾಮನಗರಕ್ಕೆ ತೆಗೆದುಕೊಂಡು ಹೋಗುವ ಸರ್ಕಾರದ ಪ್ರಯತ್ನ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನಧಿಕೃತವಾಗಿ ನೀರು ತೆಗೆದುಕೊಂಡು ಹೋಗಲು ಪ್ರಯತ್ನ ನಡೆಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರ ಕುಡಿಯುವ ನೀರಿಗೆ ಅನ್ಯಾಯವಾಗುತ್ತದೆ. ಸರ್ಕಾರ ರಚಿಸಿರುವ ತಾಂತ್ರಿಕ ಸಮಿತಿಯಿಂದ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT