ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಕೆಯಾಗದ ನಾಮಪತ್ರ

Last Updated 17 ನವೆಂಬರ್ 2021, 4:52 IST
ಅಕ್ಷರ ಗಾತ್ರ

ತುಮಕೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಂಗಳವಾರ ಆರಂಭವಾಗಿದ್ದು, ಮೊದಲ ದಿನ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ.

ಮತದಾನಕ್ಕೆ ಗ್ರಾಮ ಪಂಚಾಯಿತಿ ಕಚೇರಿ, ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ 338 ಮತಗಟ್ಟೆ ಸ್ಥಾಪಿಸಲಾಗಿದೆ. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರವನ್ನು ಕಾಯ್ದುಕೊಂಡು, ಮತಗಟ್ಟೆ ಪ್ರವೇಶಿಸುವ ಮೊದಲು ತಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡು ಮತ ಚಲಾಯಿಸಬೇಕು.

ನಾಮಪತ್ರ ಸಲ್ಲಿಸಲು ನ. 23 ಕಡೆಯ ದಿನವಾಗಿದ್ದು, ನ. 24ರಂದು ನಾಮಪತ್ರಗಳ ಪರಿಶೀಲನೆ, ನ. 26ರಂದು ಉಮೇದುವಾರಿಕೆ ವಾಪಸ್ ಪಡೆಯಲು ಅಂತಿಮ ದಿನವಾಗಿದೆ. ಡಿ. 10ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿ. 14ರಂದು ಮತಗಳ ಎಣಿಕೆ ಮಾಡಲಾಗುತ್ತದೆ.

ಎಣಿಕೆ ಕೇಂದ್ರ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತಗಳ ಎಣಿಕೆ ನಡೆಯಲಿದ್ದು, ಕೇಂದ್ರದಲ್ಲಿ ಕೈಗೊಳ್ಳಬಹುದಾದ ಪೂರ್ವ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಂಗಳವಾರ ಪರಿಶೀಲಿಸಿದರು.

ಮತ ಎಣಿಕೆ ಕೊಠಡಿ, ಸ್ಟ್ರಾಂಗ್ ರೂಮ್ ಪರಿಶೀಲಿಸಿದರು. ಸೂಕ್ತ ಪೊಲೀಸ್ ಭದ್ರತೆ ಒದಗಿಸುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ.ಶಹಾಪೂರವಾಡ ಜತೆ ಚರ್ಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ನೋಡಲ್ ಅಧಿಕಾರಿ ಬದಲು: ಮಾದರಿ ನೀತಿ ಸಂಹಿತೆಯನ್ನು ಸಮರ್ಪಕವಾಗಿಅನುಷ್ಠಾನ ಮಾಡಲು ಜಿಲ್ಲಾ ಎಂಸಿಸಿ ನೋಡಲ್ ಅಧಿಕಾರಿಯನ್ನಾಗಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಆಡಳಿತ) ಕೆ.ಎಚ್.ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.

ಎಂಸಿಸಿ ನೋಡಲ್ ಅಧಿಕಾರಿಯನ್ನಾಗಿ ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಬದಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT