ತುಮಕೂರು: ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ದಾಖಲಿಸಲು ಕೃಷಿ ಇಲಾಖೆಯು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.
ಬೆಳೆ ಪರಿಹಾರ, ಬೆಳೆ ವಿಮೆ, ಬೆಳೆ ಸಾಲ, ಬೆಂಬಲ ಬೆಲೆ ಯೋಜನೆ ಮತ್ತು ಸರ್ಕಾರದ ಇತರೆ ಸೌಲಭ್ಯಗಳನ್ನು ಪಡೆಯಲು ಬೆಳೆ ಸಮೀಕ್ಷೆ ಮಾಹಿತಿ ಬಳಸಿಕೊಳ್ಳಲಾಗುತ್ತದೆ. ರೈತರು ತಮ್ಮ ಮೊಬೈಲ್‌ನ ಪ್ಲೇ ಸ್ಟೋರ್‌ನಲ್ಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಬೆಳೆಯ ಮಾಹಿತಿ ಸಲ್ಲಿಸಬಹುದು.
ಮೊಬೈಲ್ ಆ್ಯಪ್‌ನಲ್ಲಿ ಅಗತ್ಯ ದಾಖಲೆ ಸಲ್ಲಿಸಿದರೆ, ಫ್ರೂಟ್ಸ್ ತಂತ್ರಾಂಶಕ್ಕೆ ಸಂಪರ್ಕಗೊಂಡಿದ್ದ ರೈತರ ಗುರುತಿನ ಸಂಖ್ಯೆಯಲ್ಲಿ ಸೇರ್ಪಡೆಯಾದ ಪಹಣಿ ಸೇರಿದಂತೆ ಎಲ್ಲ ವಿವರಗಳು ಕಾಣಿಸುತ್ತವೆ. ಸರ್ವೆ ನಂಬರ್ ಆಯ್ಕೆ ಮಾಡಿ, ಸದರಿ ಸರ್ವೆ ನಂಬರ್ ಗಡಿ ರೇಖೆಯೊಳಗೆ ನಿಂತು ವಿವರ ದಾಖಲಿಸಬೇಕು. ಬೆಳೆಯ ವಿಸ್ತೀರ್ಣದ ಜತೆಗೆ ಪ್ರತಿ ಬೆಳೆಯ ಎರಡು ಫೋಟೊ ತೆಗೆದು ಮಾಹಿತಿ ದಾಖಲಿಸಬಹುದು.
ಎಲ್ಲ ವಿವರಗಳನ್ನು ನಿಗದಿತ ಸಮಯದ ಒಳಗೆ ಅಪ್‍ಲೋಡ್ ಮಾಡಬೇಕು. ಮಾಹಿತಿಗೆ ಮೊ 8448447715 ಅಥವಾ ಗ್ರಾಮದ ಖಾಸಗಿ ನಿವಾಸಿ ಮತ್ತು ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ, ಸಾಂಖ್ಯಿಕ ಇಲಾಖೆಯ ಅಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.