ಮಂಗಳವಾರ, ನವೆಂಬರ್ 24, 2020
22 °C
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಭರವಸೆ

ಎರಡು ವರ್ಷದಲ್ಲಿ ಮಾದರಿ ಕ್ಷೇತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಾ: ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಗೆಲ್ಲಿಸಿದರೆ ಎರಡೂವರೆ ವರ್ಷದಲ್ಲಿ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಭರವಸೆ ನೀಡಿದರು.

ನಗರದಲ್ಲಿ ಬುಧವಾರ ರೋಡ್ ಷೊ ನಡೆಸಿ‌ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಂಸದ ಎ.ನಾರಾಯಣಸ್ವಾಮಿ ಅವರು ರಾಜೇಶ್ ಗೌಡ ಅವರ ಹಿಂದೆ ನಿಂತು ನಿಮ್ಮ ಎಲ್ಲ ಸಮಸ್ಯೆಗಳನ್ನು ಪರಿಹರಿಸುವರು ಎಂದರು.

ಕ್ಷೇತ್ರದ ಜನರು ಜೆಡಿಎಸ್ ಮತ್ತು ಕಾಂಗ್ರೆಸ್ ಬಗ್ಗೆ ಅಕ್ರೋಶಗೊಂಡಿದ್ದು, 50 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವರು ಎಂದರು.

ಉಪಚುನಾವಣೆ ನಂತರ ಕಾಂಗ್ರೆಸ್ ಒಡೆದ ಮನೆಯಾಗುವುದು. ಈಗಾಗಲೇ ಅವರಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಜಗಳ ಪ್ರಾರಂಭವಾಗಿದೆ ಎಂದರು.

ಮದ್ದಕನಹಳ್ಳಿ ಸಭೆ: ತಾಲ್ಲೂಕಿನ ಮದ್ದಕ್ಕನಹಳ್ಳಿಯಲ್ಲಿ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ, ಸಂಸದ ಪ್ರತಾಪಸಿಂಹ, ಎ.ನಾರಾಯಣಸ್ವಾಮಿ, ಶಾಸಕ ಚಂದ್ರಪ್ಪ, ಸುನೀಲ್ ವಲ್ಯಾಪುರೆ, ಬಿ.ಕೆ.ಮಂಜುನಾಥ್, ಪೆದ್ದರಾಜು, ಜಗದೀಶ್ ಚೌದರಿ ಅವರು ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರ ಪರ ಪ್ರಚಾರ ನಡೆಸಿದರು.

ಮತಯಾಚನೆ: ವಸತಿ ಸಚಿವ ವಿ‌.ಸೋಮಣ್ಣ, ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಅವರು ಅಜ್ಜೇನಹಳ್ಳಿ, ಮರುಳಪ್ಪನಹಳ್ಳಿ, ಚಿನ್ನಪ್ಪನಹಳ್ಳಿ, ಬೆಟ್ಟನಹಳ್ಳಿಯಲ್ಲಿ ಪ್ರಚಾರ ನಡೆಸಿ ಬಿಜೆಪಿ ಪರ ಮತಯಾಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು