ತುಮಕೂರು: ನಗರದ ಹೊರ ವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವನ್ನು ‘ಮಾದರಿ ಕೈಗಾರಿಕಾ ಪ್ರದೇಶ’ವಾಗಿ ರೂಪಿಸುವಂತೆಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದರು.

ಕೆಐಎಡಿಬಿ, ಕೈಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ‘ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಅಗತ್ಯ ಇರುವ ಎಲ್ಲಾ ರೀತಿಯ ಸವ ಲತ್ತುಗಳನ್ನು ಒದಗಿಸಲಾಗುತ್ತಿದೆ. ಇದು ಸಮರ್ಪಕವಾಗಿ ಬಳಕೆಯಾಗಬೇಕು. ಮಾದರಿ ಕೈಗಾರಿಕಾ ಪ್ರದೇಶವಾಗಿ ರೂಪು ಗೊಳ್ಳಬೇಕು. ವ್ಯವಸ್ಥಿತವಾಗಿ ಕೆಲಸ ಮಾಡಿ, ಮೂಲ ಸೌಕರ್ಯಗಳು ಸಮ ರ್ಪಕವಾಗಿ ಇರುವಂತೆ ನೋಡಿಕೊಂಡರೆ ಇಲ್ಲಿಗೆ ಮತ್ತಷ್ಟುಕೈಗಾರಿಕೆಗಳು ಬರಲಿವೆ’ ಎಂದು ಹೇಳಿದರು.

ಕೈಗಾರಿಕೆಗಳನ್ನು ಪ್ರಾರಂಭಿಸಲು ಮೂಲಭೂತ ಸೌಕರ್ಯದ ಕೊರತೆ ಉಂಟಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೈಗಾರಿಕಾ ಪ್ರದೇಶದಲ್ಲಿ 105 ಎಕರೆಯಲ್ಲಿರುವ ಫುಡ್‍ಪಾರ್ಕ್ ಅತ್ಯುತ್ತಮ ಮಾದರಿಯಲ್ಲಿ ನಡೆಯುತ್ತಿದೆ. ನೂರಾರು ಕೋಟಿ ಬಂಡವಾಳ ಹೂಡಿಕೆ ಯಾಗುತ್ತಿದ್ದು, ರಾಜ್ಯದ ಮೊದಲ ಫುಡ್ ಪಾರ್ಕ್ ಇದಾಗಿದೆ. ವಿವಿಧ ಆಹಾರ ಪದಾರ್ಥಗಳ ಸಂಸ್ಕರಣೆ ಮಾಡಲಾಗು
ತ್ತಿದೆ. ಫುಡ್‍ಪಾರ್ಕ್‍ನಲ್ಲಿ ಸ್ಥಳೀಯರಿಗೆ ಶೇ 80ರಷ್ಟು ಉದ್ಯೋಗ ನೀಡಬೇಕು ಎಂಬ ಉದ್ದೇಶ ಇದೆ. ಆದರೆ ಅದಕ್ಕೆ ತಕ್ಕಂತೆ ಕೌಶಲದ ಕೊರತೆಯಿಂದಾಗಿ ಅವಕಾಶಗಳು ಸಿಕ್ಕಿಲ್ಲ ಎಂದರು.

ಕಾಮಗಾರಿ ವೀಕ್ಷಣೆ: ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದರು. ನೀರು ಸಂಸ್ಕರಣಾ ಘಟಕ, ಮೆಷಿನ್ ಟೂಲ್ ಪಾರ್ಕ್ ಸೇರಿದಂತೆ ವಿವಿಧ ಕೈಗಾರಿಕೆಗಳ ಕಾಮಗಾರಿಗಳ ಪ್ರಗತಿಯ ವಿವರಗಳನ್ನು ಪಡೆದುಕೊಂಡರು. ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೂ ತೆರಳಿ ವೀಕ್ಷಿಸಿದರು. ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

ಕೆಐಎಡಿಬಿ ಸಿಇಓ ಡಾ.ಶಿವಶಂಕರ್, ಮುಖ್ಯ ಎಂಜಿನಿಯರ್ ಬಿ.ಕೆ.ಪವಿತ್ರ, ಕಾರ್ಯನಿರ್ವಾಹಕ ಎಂಜಿನಿಯರ್ ಸುನಿಲ್, ಭೂಸ್ವಾಧೀನ ವಿಶೇಷ ಜಿಲ್ಲಾಧಿಕಾರಿ ಭಂಡಾರಿ, ಭೂಸ್ವಾಧೀನಾಧಿಕಾರಿ ತಬಸ್ಸಮ್ ಜಹೇರಾ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.