ತುಮಕೂರು: ಜಿಲ್ಲೆಗೆ ಮೂರನೇ ಬಾರಿ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಆದರೂ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಅಗತ್ಯ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಮನವಿ ಮಾಡಿದರು.

ಈ ಹಿಂದೆ ಪ್ರಧಾನಿಗಳೇ ತಿಳಿಸಿದಂತೆ 2018ರೊಳಗೆ ಗುಬ್ಬಿ ತಾಲ್ಲೂಕು ಬಿದರೆಹಳ್ಳ ಕಾವಲ್ನಲ್ಲಿನ ಎಚ್ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕ ಪ್ರಾರಂಭವಾಗಬೇಕಿತ್ತು. ಆದರೆ, ಈವರೆಗೂ ಘಟಕ ಪ್ರಾರಂಭವಾಗಿಲ್ಲ. ಶೀಘ್ರವೇ ಈ ಬಗ್ಗೆ ಕ್ರಮವಹಿಸಿ ಪ್ರಾರಂಭೋತ್ಸವಕ್ಕೆ ದಿನಾಂಕ ನಿಗದಿಪಡಿಸಬೇಕು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಕಲ್ಪತರು ನಾಡಿನಲ್ಲಿ ಕೊಬ್ಬರಿ, ತೆಂಗು ಬೆಳೆಗಾರರ ಹಿತದೃಷ್ಟಿಯಿಂದ ಕೊಬ್ಬರಿಗೆ ಕನಿಷ್ಠ ₹ 20 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು. ಅಡಿಕೆ ಮತ್ತು ರೇಷ್ಮೆ ಹೊರದೇಶಗಳಿಂದ ಅಕ್ರಮವಾಗಿ ನುಸುಳಿ ಬರುತ್ತಿದೆ. ದೇಶದ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಕಠಿಣ ಕ್ರಮ ಜರುಗಿಸಬೇಕು ಮತ್ತು ಸಂಬಂಧಿಸಿದ ನೀತಿ ರೂಪಿಸಬೇಕು ಎಂದು ಮನವಿ ಮಾಡಿದರು.

ಇಸ್ರೊ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಆ ಮೂಲಕ ಜಿಲ್ಲೆ ಜನರಿಗೆ ಉದ್ಯೋಗ ಮತ್ತು ಇತರ ಆರ್ಥಿಕ ಚಟುವಟಿಕೆಗಳನ್ನು ಸೃಷ್ಟಿಸಲು ಕ್ರಮವಹಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ 206 ಮತ್ತು ತುಮಕೂರು ರೈಲು ಯೋಜನೆಗಳು ಅನುದಾನ ಕೊರತೆ ಎದುರಿಸುತ್ತಿವೆ. ಈ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಆದೇಶಿಸಬೇಕು. ಜ.2 ರಂದು ಪ್ರಧಾನಿ ಬಂದಾಗ ಇಲ್ಲಿನ ಸಂಸದರು ವೇದಿಕೆಯಲ್ಲೇ ಈ ಎಲ್ಲ ಯೋಜನೆಗಳ ಬಗ್ಗೆ ಪ್ರಧಾನಿ ಅವರ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹೆಬ್ಬೂರು ಚಿಕ್ಕಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯ ರಂಗಸ್ವಾಮಿ, ಮುಖಂಡ ರಾಯಸಂದ್ರ ರವಿಕುಮಾರ್ ಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.