ನೇಕಾರರಿಗೆ ಧ್ವನಿ ನೀಡಿದ ಮೋದಿ

ಮಂಗಳವಾರ, ಏಪ್ರಿಲ್ 23, 2019
33 °C
ರಾಜ್ಯ ನೇಕಾರ ಮಹಾಸಭಾ ಅಧ್ಯಕ್ಷ ಬಿ.ಎಸ್‌.ಸೋಮಶೇಖರ್‌ ಹೇಳಿಕೆ

ನೇಕಾರರಿಗೆ ಧ್ವನಿ ನೀಡಿದ ಮೋದಿ

Published:
Updated:
Prajavani

ತುಮಕೂರು: ಬಿಜೆಪಿಯು ನೇಕಾರರನ್ನು ಗುರುತಿಸಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದೆ. ಹಾಗಾಗಿ ರಾಜ್ಯದ 28 ಕ್ಷೇತ್ರದಲ್ಲೂ ನೇಕಾರ ಸಮುದಾಯದ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ತೀರ್ಮಾನಿಸಿದ್ದಾರೆ ಎಂದು ರಾಜ್ಯ ನೇಕಾರ ಮಹಾಸಭಾ ಅಧ್ಯಕ್ಷ ಬಿ.ಎಸ್‌.ಸೋಮಶೇಖರ್‌ ತಿಳಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2015 ಆಗಸ್ಟ್‌ 7 ರಂದು ರಾಷ್ಟ್ರೀಯ ಕೈ ಮಗ್ಗ ದಿನ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಅವರು ಸಮಾಜಕ್ಕೆ ಧ್ವನಿ ನೀಡಿದ್ದಾರೆ ಎಂದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ದೇವರ ದಾಸಿಮಯ್ಯ ದಿನಾಚರಣೆಗೆ ಅವಕಾಶ ಮಾಡಿಕೊಟ್ಟರು. ಜೊತೆಗೆ ಸಮಾಜದ ಮುಖಂಡರೊಬ್ಬರು ಶಾಸಕರಾಗಲು ಅವಕಾಶ ಆಯಿತು. ಹಾಗಾಗಿ ನೇಕಾರ ಸಮುದಾಯ ಬಿಜೆಪಿ ಬೆಂಬಲಿಸಬೇಕು ಎಂದು ಹೇಳಿದರು.

ನೇಕಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗಂಗಪ್ಪ ಮಾತನಾಡಿ,‘ನೇಕಾರರ ಸಮಸ್ಯೆಗಳ ಬಗ್ಗೆ ಯಾವ ಸರ್ಕಾರವೂ ಗಮನಹರಿಸದೆ, ರಾಜಕೀಯ ಪ್ರಾತಿನಿಧ್ಯ ನೀಡುವ ಪ್ರಯತ್ನ ಸಹ ಮಾಡಲಿಲ್ಲ. ಈ ಸ್ಥಿತಿಯಲ್ಲಿ ಬಿಜೆಪಿಯಿಂದ ನೇಕಾರರಿಗೆ ಹೆಚ್ಚು ನ್ಯಾಯ ಸಿಕ್ಕಿದೆ. ಹೀಗಾಗಿ ಬಿಜೆಪಿಯನ್ನು ಸಮುದಾಯ ಬೆಂಬಲಿಸುತ್ತದೆ’ ಎಂದರು.

ಬಡ ನೇಕಾರರ ನೆರವಿಗೆ ಸರ್ಕಾರಗಳು ಬರಬೇಕು. ತಮಿಳುನಾಡಿನಲ್ಲಿ ಇರುವಂತೆ ಸರ್ಕಾರ ನೇಕಾರರ ಮಗ್ಗಗಳಿಗೆ ಉಚಿತ ವಿದ್ಯುತ್ ನೀಡಬೇಕು. ಗುರುತಿನ ಚೀಟಿ ಕೊಡಬೇಕು. ನಿವೇಶನ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !