ಗುರುವಾರ , ಅಕ್ಟೋಬರ್ 21, 2021
22 °C

ತುಮಕೂರು: 1.11 ಲಕ್ಷ ಮಂದಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಕೋವಿಡ್ ಲಸಿಕಾ ಮೆಗಾ ಮೇಳದಲ್ಲಿ 1,11,208 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಆಯ್ದ ಶಾಲೆ ಹಾಗೂ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದಲೇ ಲಸಿಕೆ ನೀಡಲಾಯಿತು. ನಗರ, ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕಾರ್ಯಕ್ಕಾಗಿ 460 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಹೋಬಳಿ ಮಟ್ಟದಲ್ಲಿ ವಿವಿಧ ಇಲಾಖೆಗಳ 50 ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿತ್ತು. ಲಸಿಕೆ ಪಡೆಯಲು ಬೆಳಗ್ಗಿನಿಂದಲೇ ಜನರು ಸಾಲಿನಲ್ಲಿ ನಿಂತಿದ್ದರು. ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಲಸಿಕೆ ಪಡೆದರು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ 11 ಸಾವಿರ, ಗುಬ್ಬಿ 11 ಸಾವಿರ, ಕೊರಟಗೆರೆ 8 ಸಾವಿರ, ಕುಣಿಗಲ್ 11 ಸಾವಿರ, ಮಧುಗಿರಿ 11 ಸಾವಿರ, ಪಾವಗಡ 10 ಸಾವಿರ, ಶಿರಾ 14 ಸಾವಿರ, ತಿಪಟೂರು 12 ಸಾವಿರ, ತುಮಕೂರು 29 ಸಾವಿರ, ತುರುವೇಕೆರೆ ತಾಲ್ಲೂಕಿಗೆ 8 ಸಾವಿರ ಸೇರಿದಂತೆ ಒಟ್ಟು 1.25 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ 11,555, ಗುಬ್ಬಿ 11,964, ಕೊರಟಗೆರೆ 7,292, ಕುಣಿಗಲ್ 10,027, ಮಧುಗಿರಿ 7,475, ಪಾವಗಡ 6,240, ಶಿರಾ 13,065, ತಿಪಟೂರು 13,871, ತುಮಕೂರು 21,271, ತುರುವೇಕೆರೆ ತಾಲ್ಲೂಕಿನಲ್ಲಿ 8,448 ಸೇರಿದಂತೆ ಒಟ್ಟು 1,11,208 ಮಂದಿಗೆ ಲಸಿಕೆ ನೀಡಲಾಗಿದೆ.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಪಾವಗಡ ಪಟ್ಟಣ, ಕೊರಟಗೆರೆ ತಾಲ್ಲೂಕಿನ ತುಂಬಾಡಿ, ಮಧುಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಲಸಿಕೆ ಪಡೆಯುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಸಿಕೆ ಶೇಖರಿಸಲಾಗಿತ್ತು. ರೋಟರಿ ಸಂಸ್ಥೆ, ರೆಡ್‍ಕ್ರಾಸ್, ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿದವು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು