ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರೇ ಬುದ್ಧಿ ಕಲಿಸುತ್ತಾರೆ: ಸಂಸದ ಜಿ.ಎಸ್. ಬಸವರಾಜು

Last Updated 12 ಏಪ್ರಿಲ್ 2022, 3:01 IST
ಅಕ್ಷರ ಗಾತ್ರ

ಹಾಗಲವಾಡಿ: ‘ಗುಬ್ಬಿ ಜನತೆ ಬುದ್ಧಿ ಕಲಿಯದಿದ್ದರೆ ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಕಾಣುವುದಿಲ್ಲ’ ಎಂದು ಸಂಸದ ಜಿ.ಎಸ್. ಬಸವರಾಜು ಹೇಳಿದರು.

ಗುಬ್ಬಿ ತಾಲ್ಲೂಕಿನ ಬೆಟ್ಟದಹಳ್ಳಿಯಲ್ಲಿ ನಡೆದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಸನ್ಯಾಸಿಗಳ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಮಾಧ್ಯಮಗಳ ಮೂಲಕ ತಿಳಿದಿದ್ದೇನೆ. ಶ್ರೀನಿವಾಸ್ ಕಾಂಗ್ರೆಸ್‌ನವರ ಜತೆ ಸೇರಿಕೊಂಡು ಬಾಯಿಗೆ ಬಂದಂತೆ ಮಾತನಾಡುವುದನ್ನು ಕಲಿತಿದ್ದಾರೆ. ಇದರ ಫಲ ಅನುಭವಿಸುತ್ತಾರೆ’ ಎಂದು ತಿಳಿಸಿದರು.

‘ಈ ತಾಲ್ಲೂಕಿನ ಅಭಿವೃದ್ಧಿಗೆ ನಾನು ಎಷ್ಟೇ ಅನುದಾನ ತಂದರೂ ತಾನೇ ಮಾಡಿದ್ದು ಎಂದು ತನ್ನ ಹೆಸರನ್ನು ಹೇಳಿಕೊಂಡು ತಿರುಗುತ್ತಿದ್ದಾರೆ. ಅಂತಹ ಶಾಸಕನಿಗೆ ನಾನು ಏನು ಹೇಳಲಿ. ಮುಂದಿನ ದಿನಗಳಲ್ಲಿ ಮತದಾರರೇ ಉತ್ತರ ನೀಡುತ್ತಾರೆ’ ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅ.ನ. ಲಿಂಗಪ್ಪ, ಮುಖಂಡರಾದ ಬಿ.ಎನ್. ನಂಜುಂಡಪ್ಪ, ನಿರಂಜನಮೂರ್ತಿ, ಸಿದ್ದಲಿಂಗಸ್ವಾಮಿ, ಸಿದ್ದರಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT