ತುಮಕೂರು: ತಾಲ್ಲೂಕಿನ ಅಮಲಾಪುರ(ವಿಜ್ಞಾನ ಗುಡ್ಡ)ದಲ್ಲಿ ಎಂಎಸ್ಎಂಇ ಟೆಕ್ನಾಲಜಿ ಸೆಂಟರ್ ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ₹100 ಕೋಟಿ ಅನುದಾನ ಮಂಜೂರಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದರು.

ಕೌಶಲ್ಯ ತರಬೇತಿಗಳ ರೂಪುರೇಷೆ ಸಿದ್ಧಪಡಿಸುವ ಕುರಿತು ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರವು ಅಮಲಾಪುರದಲ್ಲಿ ಈಗಾಗಲೇ 15 ಎಕರೆ ಪ್ರದೇಶವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ್ದು, ಇಲ್ಲಿ ಸ್ಥಾಪಿಸಲಾಗುವ ಸೆಂಟರ್ನಲ್ಲಿ ಪ್ರತಿ ವರ್ಷ ಸುಮಾರು 5 ಸಾವಿರ ಅಭ್ಯರ್ಥಿಗಳಿಗೆ ಕೈಗಾರಿಕಾಧಾರಿತ ತರಬೇತಿ ನೀಡಲು ಉದ್ದೇಶಿಸಲಾಗಿದೆ’ ಎಂದು ತಿಳಿಸಿದರು.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉದ್ಯೋಗ ನೀಡಲು ಕೃಷಿ, ರೇಷ್ಮೆ, ತೋಟಗಾರಿಕೆ, ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಡಿ ಉತ್ಪಾದಿಸುವ ಮೌಲ್ಯವರ್ಧಿತ ಉತ್ಪನ್ನಗಳನ್ನು ಕ್ಲಸ್ಟರ್ ಮಾದರಿಯಲ್ಲಿ ಸ್ಥಾಪಿಸುವ ಬಗ್ಗೆ 15 ದಿನಗಳೊಳಗಾಗಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ಮಾರ್ಟ್ ಸಿಟಿ ವತಿಯಿಂದ ₹20 ಕೋಟಿ ವೆಚ್ಚದಲ್ಲಿ ತುಮಕೂರು ತಾಲೂಕಿನ ಅಮಲಾಪುರ, ಯಲ್ಲಾಪುರ, ಅರಕೆರೆ, ಅಜ್ಜಪ್ಪನಹಳ್ಳಿ, ವೀರನಕಲ್ಲು, ಸ್ವಾಂದೇನಹಳ್ಳಿ ಮತ್ತು ಮುತ್ಸಂದ್ರ ಗ್ರಾಮಗಳಲ್ಲಿ ಸಂಶೋಧನಾ ಕೇಂದ್ರ ಮತ್ತು ಸ್ಕಿಲ್ ಪಾರ್ಕ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಘಟಕಗಳಿಗೆ ಹೆಚ್ಚಿನ ಒತ್ತು ನೀಡುವ ದೃಷ್ಟಿಯಿಂದ ಆಹಾರ ಸಂಸ್ಕರಣ ಘಟಕಗಳನ್ನು ಕ್ಲಸ್ಟರ್ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಡೆನ್ಮಾರ್ಕ್ ಮಾದರಿಯಲ್ಲಿ ವಸತಿ ಸೌಕರ್ಯಗಳನ್ನು ಒಳಗೊಂಡಂತೆ 342 ಉತ್ಪನ್ನಗಳನ್ನು ಕ್ಲಸ್ಟರ್ ಮಾದರಿಯಲ್ಲಿ ಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಶುಭಾ ಕಲ್ಯಾಣ್, ದಿಶಾ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ್, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.