ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಮುದ್ದಹನುಮೇಗೌಡ ಇಂದು ಮರಳಿ ಕಾಂಗ್ರೆಸ್‌ಗೆ

Published 22 ಫೆಬ್ರುವರಿ 2024, 0:13 IST
Last Updated 22 ಫೆಬ್ರುವರಿ 2024, 0:13 IST
ಅಕ್ಷರ ಗಾತ್ರ

ತುಮಕೂರು: ಬಿಜೆಪಿ ತೊರೆದಿದ್ದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ  ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಮರಳಲಿದ್ದಾರೆ. ಸಚಿವರಾದ ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್– ಜೆಡಿಎಸ್ ಮೈತ್ರಿಯಿಂದಾಗಿ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿತ್ತು.  ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ನಂತರವೂ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಸಿಕ್ಕಿರಲಿಲ್ಲ.

ವಿಧಾನಸಭೆ ಚುನಾವಣೆ ಸಮಯದಲ್ಲಿ ಕುಣಿಗಲ್ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿಜೆಪಿ ಸೇರಿದ್ದರು. ಆ ಪಕ್ಷದಲ್ಲೂ ಕುಣಿಗಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್‌ ಸಿಗಲಿಲ್ಲ. ಲೋಕಸಭೆಗೆ ಬಿಜೆಪಿಯಿಂದ ಟಿಕೆಟ್ ಸಿಗಬಹುದು ಎಂಬ ಆಶಾಭಾವನೆಯಲ್ಲಿ ಇದ್ದರು.

ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಟಿಕೆಟ್ ಸಿಗುವುದು ಖಾತರಿಯಾಗದೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ನಂತರ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ಗೆ ಮತ್ತೆ ಮರಳುತ್ತಿರುವ ಮುದ್ದುಹನುಮೇಗೌಡ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ಸಿಗುವ ನಿರೀಕ್ಷೆಯಲ್ಲಿ ಇದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT