ಸೋಮವಾರ, ಏಪ್ರಿಲ್ 19, 2021
32 °C

ತುಮಕೂರು: ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಹಣದ ವಿಚಾರವಾಗಿ ಕೊಲೆ ಮಾಡಿದ್ದ ಅಪರಾಧಿಗೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ, ₹10 ಸಾವಿರ ದಂಡ ವಿಧಿಸಿದೆ.

ತುಕಾರಾಮಚಂದ್ರ ಪವಾರ್ ಶಿಕ್ಷೆಗೆ ಒಳಗಾದ ಅಪರಾಧಿ. ಶಿರಾ ತಾಲ್ಲೂಕು ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಗ್ರಾಮದ ಸಮೀಪ ಗುಡಿಸಲಿನಲ್ಲಿ ವಾಸವಿದ್ದ ಪಾಂಡು ಕಿಶನ್ ಹೀಲಂ ಬಳಿಗೆ 2019 ಜೂನ್ 2ರಂದು ತೆರಳಿದ್ದ ಪವಾರ್, ಹಣ ನೀಡುವಂತೆ ಕೇಳಿದ್ದಾನೆ. ಹಣ ಕೊಡದಿದ್ದಾಗ ಕೊಡಲಿಯಿಂದ ಹಲ್ಲೆ ನಡೆಸಿ ಹೀಲಂನನ್ನು ಕೊಲೆ ಮಾಡಿದ್ದಾನೆ.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿ.ಎ.ಕವಿತ ವಾದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.