ಶನಿವಾರ, ಸೆಪ್ಟೆಂಬರ್ 18, 2021
29 °C

ತುಮಕೂರು: ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಅಪರಾಧಿಗೆ ನ್ಯಾಯಾಧೀಶ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ಅವರು ಜೀವಾವಧಿ ಶಿಕ್ಷೆ ಹಾಗೂ ₹10,000 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ರವೀಂದ್ರ (35) ಶಿಕ್ಷೆಗೆ ಒಳಗಾದ ಕೊಲೆ ಅಪರಾಧಿ.

ನಗರದಲ್ಲಿ ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದ ರವೀಂದ್ರ 2019ರ ಏಪ್ರಿಲ್‌ನಲ್ಲಿ ನಗರದ ಗುಬ್ಬಿ ವೀರಣ್ಣ ರಂಗ ಮಂದಿರದ ಬಳಿಯ ಮಹಾನಗರ ಪಾಲಿಕೆ ಮಳಿಗೆ ಬಳಿ ತನ್ನ ಸ್ನೇಹಿತ ಸಲೀಂ ಬಾಬು ಬಳಿ ಗುಜರಿ ಸಾಮಗ್ರಿ ಮಾರಾಟ ಮಾಡಿ ಅದರಿಂದ ಬಂದ ಹಣ ಹಂಚಿಕೊಳ್ಳುವ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದರು. ಸಿಮೆಂಟ್ ಇಟ್ಟಿಗೆಯನ್ನು ಸಲೀಂ ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿದ್ದನು.

ಅಪರಾಧಿಯು ದಂಡಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ 1 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಕೋರ್ಟ್‌ ತೀರ್ಪಿನಲ್ಲಿ ಹೇಳಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.