ತುಮಕೂರು: ನಗರ ಹೊರವಲಯದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಬಿಹಾರದ ಚೋಟನ್ ಕುಮಾರ್ (19) ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ರಾಮ್‌ಬಾಬು ಕುಮಾರ್ (20), ಮಂಟುಕುಮಾರ್ (22), ಅಜಯ್‌ಕುಮಾರ್ (20) ಬಂಧಿತರು. ಮತ್ತೊಬ್ಬ ಕೊಲೆ ಆರೋಪಿ ಕಾನೂನು ಸಂಘರ್ಷಕ್ಕೆ ಒಳಪಟ್ಟ 13 ವರ್ಷದ ಬಾಲಕನಿಗಾಗಿ ಶೋಧಕಾರ್ಯ ನಡೆದಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹಾಕಿದ್ದ ಪೆಂಡಾಲ್‌ನಲ್ಲಿ ಹಾಡು ಬದಲಾಯಿಸುವ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ರಚಿಸಿದ್ದ ವಿಶೇಷ ತಂಡ ಮೂವರನ್ನು ಬಂಧಿಸಿದೆ.