ಗುರುವಾರ , ಜುಲೈ 29, 2021
21 °C

ಸೈನಿಕರಿಗೆ ಆತ್ಮಸ್ಥೈರ್ಯ; ಸಹಿ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಗಡಿಯಲ್ಲಿ ದೇಶದ ರಕ್ಷಣೆಗೆ ನಿಂತಿರುವ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಹಾಲಪ್ಪ ಪ್ರತಿಷ್ಠಾನದಿಂದ ಸಿದ್ಧಗಂಗಾ ಮಠದಲ್ಲಿ ಶನಿವಾರ ಸಹಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಸಿದ್ಧಲಿಂಗಸ್ವಾಮೀಜಿ ಸಹಿ ಮಾಡುವ ಮೂಲಕ ಕಾರ್ಯಕ್ಕೆ ಚಾಲನೆ ನೀಡಿ, ‘ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು ನಮ್ಮ ಸೈನಿಕರ ಮೇಲೆ ಅಮಾನುಷ ಕೃತ್ಯ ಎಸಗಿದ್ದಾರೆ. ಸೈನಿಕರು ಪ್ರಾಣದ ಹಂಗು ತೊರೆದು ದೇಶವನ್ನು ರಕ್ಷಿಸುತ್ತಿದ್ದಾರೆ’ ಎಂದು ಸ್ಮರಿಸಿದರು.

ದೇಶ ಕಾಯುತ್ತಿರುವ ಪ್ರತಿಯೊಬ್ಬರಿಗೂ ಕೃತಜ್ಞತೆ ಅರ್ಪಿಸಬೇಕು. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಸೈನಿಕರ ಜೊತೆ ಇದ್ದೇವೆ ಎನ್ನುವ ಸಂದೇಶವನ್ನು ತಲುಪಿಸುವುದಕ್ಕೆ ಸಹಿ ಸಂಗ್ರಹ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ, ‘ಸಿದ್ಧಗಂಗಾ ಮಠದ ಆವರಣದಿಂದ ಶ್ರೀಗಳ ಆಶೀರ್ವಾದದೊಂದಿಗೆ 10 ಸಾವಿರ ಸಹಿ ಸಂಗ್ರಹಮಾಡಿ ಸೈನ್ಯದ ಮುಖ್ಯಸ್ಥರಾದ ಜ.ಬಿಪಿನ್ ರಾವತ್ ಅವರಿಗೆ ಕಳುಹಿಸಿಕೊಡಲಾಗುವುದು’ ಎಂದರು.

ಮಾಜಿ ಸೈನಿಕರಾದ ರೇಣುಕಾಪ್ರಸಾದ್, ನಂಜುಂಡಯ್ಯ, ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಆರ್.ರೇವಣ್ಣ, ಎಂ.ಬಸವಯ್ಯ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು