ಗುಬ್ಬಿ: ಕಲಾವಿದರಿಗೆ ಎಲ್ಲ ಸೌಕರ್ಯ ಒದಗಿಸಿಕೊಟ್ಟು ಪ್ರೋತ್ಸಾಹ ನೀಡಿದರೆ ಕಲೆ ಹಾಗೂ ಸಂಸ್ಕೃತಿ ಉಳಿಸಲು ಸಾಧ್ಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ್ ಬಿದರೆ ಹೇಳಿದರು.
ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ ರಂಗ ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್. ವಿಜಯಕುಮಾರ್ ಮಾತನಾಡಿ, ವೀರಣ್ಣ ಅವರ ಹುಟ್ಟೂರಾದ ಗುಬ್ಬಿ ತಾಲ್ಲೂಕು ಕಲೆ ಹಾಗೂ ಕಲಾವಿದರ ತವರೂರು ಎಂದರು
ಪಟ್ಟಣ ಪಂಚಾಯಿತಿ ಸದಸ್ಯ
ಜಿ.ಸಿ. ಕೃಷ್ಣಮೂರ್ತಿ ಮಾತನಾಡಿ
ದರು.
ಲಕ್ಷ್ಮಣ್ ದಾಸ್ ತಂಡದಿಂದ ಪೌರಾಣಿಕ ರಂಗ ಗೀತೆಗಳನ್ನು ಹಾಡಲಾಯಿತು. ಗುಬ್ಬಿ ವೀರಣ್ಣ ಟ್ರಸ್ಟ್ ಸದಸ್ಯರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.