ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಲಿತರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಎನ್.ರಾಜಣ್ಣ ಆರೋಪ

Published 21 ಏಪ್ರಿಲ್ 2024, 13:20 IST
Last Updated 21 ಏಪ್ರಿಲ್ 2024, 13:20 IST
ಅಕ್ಷರ ಗಾತ್ರ

ಕುಣಿಗಲ್: ‘ಕೇಂದ್ರದ ಹತ್ತು ವರ್ಷದ ಆಡಳಿತದಲ್ಲಿ ಬಿಜೆಪಿ ಸರ್ಕಾರ ದಲಿತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ’ ಎಂದು ರಾಜ್ಯ ದಲಿತ ಹಕ್ಕುಗಳ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರಾಜಣ್ಣ ಆರೋಪಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯಲ್ಲೂ ಅನ್ಯಾಯವಾದ ಪರಿಣಾಮ ಉನ್ನತ ಶಿಕ್ಷಣದಲ್ಲಿ ಸಾಫಲ್ಯ ಕಾಣಲಾಗದೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಕ್‌ಲಾಗ್ ಹುದ್ದೆಯಲ್ಲೂ ಎರಡು ಲಕ್ಷ ದಲಿತರು ವಂಚಿತರಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವಂತಾಗಿದೆ. ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಬಲಹೀನಗೊಳಿಸುವ ವ್ಯವಸ್ಥೆ ನಡೆಯುತ್ತಿದೆ ಎಂದು ದೂರಿದರು.

ಬಿಜೆಪಿ ಸರ್ಕಾರ ಜನರಿಗೆ ನೀಡಿದ್ದ ಬೆಲೆ ಏರಿಕೆ ತಡೆ, ಉದ್ಯೋಗ ಸೃಷ್ಟಿ, ಕಪ್ಪುಹಣ ತರುವ ಭರವಸೆ, ಆಶ್ವಾಸನೆಗಳು ಸುಳ್ಳಾಗಿವೆ. ರಾಜ್ಯದ 20ಕ್ಕೂ ಹೆಚ್ಚು ದಲಿತಪರ ಸಂಘಟನೆಗಳು ಸೇರಿ ಸಂವಿಧಾನ ಉಳಿಸುವ ಸಲುವಾಗಿ ರಾಜ್ಯದ ಮೂಲೆ ಮೂಲೆಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಶಿವಶಂಕರ್, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ರಾಜು ವೆಂಕಟಪ್ಪ, ಪದಾಧಿಕಾರಿಗಳಾದ ಭರತ್, ರಾಜು ತುವ್ವೆಕೆರೆ, ವೆಂಕಟೇಶ, ಯೋಗೇಶ್, ಹರೀಶ್, ಸತೀಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT