ಗುರುವಾರ , ಜನವರಿ 21, 2021
18 °C

ನದಾಫ್ ನಿಗಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಹಿಂದುಳಿದಿರುವ ನದಾಫ್– ಪಿಂಜಾರ ಸಮುದಾಯದ ಪ್ರಗತಿಗೆ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ರಾಜ್ಯ ನದಾಫ್‌– ಪಿಂಜಾರ ಸಂಘದ ಪ್ರಮುಖರು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ‘ಇತರೆ ಸಮುದಾಯಗಳಿಗೆ ಅಭಿವೃದ್ಧಿ ನಿಗಮ ಮಾಡಿದಂತೆ ನಮಗೂ ಸ್ಥಾಪಿಸಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಮುದಾಯ ತೀರಾ ಹಿಂದುಳಿದಿದೆ’ ಎಂದು ತಿಳಿಸಿದ್ದಾರೆ. ಪಿಂಜಾರರು ಪ್ರವರ್ಗ–1ಕ್ಕೆ ಒಳಪಟ್ಟಿದ್ದರೂ ಯಾವ ಇಲಾಖೆ ವ್ಯಾಪ್ತಿಗೆ ಸೇರಿದೆ ಎಂಬುದು ಯಾರಿಗೂ ತಿಳಿದಿಲ್ಲ. ಜನಾಂಗದ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಜ. 15ರ ಒಳಗೆ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಧರಣಿ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಬ್ರಾಹಿಂ ಖಲೀಲ್ ತಿಳಿಸಿದರು.

ಬಷೀರ್ ಅಹಮದ್, ಮಹಮ್ಮದ್ ದಾದಾಪೀರ್, ಮಹಮ್ಮದ್ ಜೈಹಿದ್, ಮುನೀರ್ ಮುನ್ನ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.