ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಫಲಕ ಧ್ವಂಸ: 7 ಜನರ ಬಂಧನ

Published 6 ಮಾರ್ಚ್ 2024, 6:50 IST
Last Updated 6 ಮಾರ್ಚ್ 2024, 6:50 IST
ಅಕ್ಷರ ಗಾತ್ರ

ತುಮಕೂರು: ಅಂಗಡಿ ಮುಂಗಟ್ಟುಗಳಿಗೆ ಅಳವಡಿಸಿದ್ದ ನಾಮಫಲಕ ಧ್ವಂಸಗೊಳಿಸಿದ ಕರ್ನಾಟಕ ರ‌ಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌ಗೌಡ ಸೇರಿದಂತೆ 7 ಜನರನ್ನು ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ನಗರದ ಎಂ.ಜಿ.ರಸ್ತೆಯ ಅಂಗಡಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್‌ ನಾಮಫಲಕಗಳನ್ನು ಕಿತ್ತು ಹಾಕಿದ್ದರು. ಅಂಗಡಿಗಳ ಮಾಲೀಕರು ರಕ್ಷಣಾ ವೇದಿಕೆಯ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದರು. ದೂರಿನ ಮೇರೆಗೆ 7 ಜನರನ್ನು ಬಂಧಿಸಲಾಗಿದೆ.

ರಂಗನಾಥ್‌, ಪ್ರಕಾಶ್‌, ಅನ್ಸರ್‌ಪಾಷ, ಚನ್ನಬಸವಯ್ಯ, ರಂಗನಾಥ್‌, ಕೆ.ಎಲ್‌.ಗಿರೀಶ್‌ ಬಂಧಿತರು. ಇವರ ಬಿಡುಗಡೆಗೆ ಆಗ್ರಹಿಸಿ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ‘ನಾಮಫಲಕ ಧ್ವಂಸಗೊಳಿಸಿದ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು’ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT