ಶುಕ್ರವಾರ, ಆಗಸ್ಟ್ 6, 2021
25 °C

ಕೆಎಸ್‌ಆರ್‌ಟಿಸಿ ಕಟ್ಟಡಕ್ಕೆ ಅರಸು ಹೆಸರಿಡಿ: ಧನಿಯಾಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಶ್ರಮಿಸಿದ ಧೀಮಂತ ನಾಯಕ ದಿ.ದೇವರಾಜ ಅರಸು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಾಕುಮಾರ್ ಹೇಳಿದರು.

ಇಲ್ಲಿನ ಮಹಾನಗರ ಪಾಲಿಕೆ ಆವರಣದ ಉದ್ಯಾನದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಟ್ಟಡಕ್ಕೆ ದೇವರಾಜ ಅರಸು ಹೆಸರು ನಾಮಕರಣ ಮಾಡಬೇಕು. ನಿಲ್ದಾಣದ ಮುಂಭಾಗ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಅಂದು ಅರಸು ಮುಖ್ಯಮಂತ್ರಿ ಆಗದಿದ್ದರೆ ಇಂದು ಹಿಂದುಳಿದ ವರ್ಗದ ಜನರು ಸರ್ಕಾರಿ ಕೆಲಸ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಅವರ ದೂರದೃಷ್ಟಿಯ ಫಲ ಹಿಂದುಳಿದ ವರ್ಗದವರು ಎಲ್ಲ ವರ್ಗದವರಂತೆ ಬದುಕು ಸಾಗಿಸಲು ಸಾಧ್ಯವಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಕೇಶವರಾಜು ಮಾತನಾಡಿ, ಅರಸು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆದರೆ ಉತ್ತಮ ಸಮಾಜ ನಿರ್ಮಾಣವಾಗಲಿದೆ. ಅರಸು ಅವರು ಅಂದೇ ಕರ್ನಾಟಕಕ್ಕೆ ಮುಂದಿನ ದಿನಗಳು ಹೇಗಿರಬೇಕು ಎಂಬ ಪರಿಕಲ್ಪನೆ ನೀಡಿದ್ದರು ಎಂದು ಸ್ಮರಿಸಿದರು.

ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್‍ಕುಮಾರ್, ಪರಿಸರ ಎಂಜಿನಿಯರ್ ಮೋಹನ್, ಪ್ರಭಾಕರ್, ಒಕ್ಕೂಟದ ವೆಂಕಟಾಚಲ, ವಿಠಲ್, ಚೇತನ, ಅನಿಲ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು