ಕುಣಿಗಲ್: ಮಧುಮೇಹ ಮತ್ತು ರಕ್ತದೊತ್ತಡದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಬಹು ಅಂಗಾಂಗ ವೈಫಲ್ಯಕ್ಕೆ ದಾರಿಯಾಗುತ್ತದೆ ಎಂದು ಶಾಸಕ ಡಾ.ರಂಗನಾಥ್ ಎಚ್ಚರಿಸಿದರು.

ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ಶುಕ್ರವಾರ ‘ನಮ್ಮ ಕ್ಲಿನಿಕ್’ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತ ಪ್ರಜೆ ದೇಶದ ಆಸ್ತಿ. 40 ವರ್ಷ ದಾಟಿದವರು ಎರಡು ತಿಂಗಳಿಗೊಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಪುರಸಭೆ ಸದಸ್ಯರು ಅವರ ವಾರ್ಡ್ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಪ್ರಾಥಮಿಕ ಹಂತದಲ್ಲೆ ರೋಗದ ಲಕ್ಷಣಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ನೆರವಾಗಬೇಕು ಎಂದರು.

ಆರೋಗ್ಯ ಇಲಾಖೆಯ ಸಿಬ್ಬಂದಿ, ವೈಯುಕ್ತಿಕ ಜೀವನದ ಒತ್ತಡಗಳನ್ನು ನಿಭಾಯಿಸಿಕೊಂಡು, ವೃತ್ತಿ ಬದ್ಧತೆ ಮೆರೆದು, ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು. ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರ ತಂಡ ಸಮರ್ಥವಾಗಿ ಕಾರ್ಯನಿರ್ವಹಿಸಿ ಪ್ರತಿ ತಿಂಗಳು ನೂರಕ್ಕೂ ಹೆಚ್ಚು ಹೆರಿಗೆ ಮಾಡುತ್ತಿರುವುದು ಶ್ಲಾಘನೀಯ. ಸಾರ್ವಜನಿಕ ಆಸ್ಪತ್ರೆಯಲ್ಲಿ ಇನ್ಫೊಸಿಸ್ ನೆರವಿನಿಂದ ₹60 ಕೋಟಿ ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಾಣ ಮುಗಿಯುವ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸಿಬ್ಬಂದಿ ನೇಮಿಸಿ ಕಾರ್ಯನಿರ್ವಹಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷೆ ಗೈರು: ಪತಿ ಹಾಜರಿಗೆ ಆಕ್ಷೇಪ

ಕಾರ್ಯಕ್ರಮಕ್ಕೆ ಪುರಸಭೆ ನೂತನ ಅಧ್ಯಕ್ಷೆ ಮಂಜುಳಾ ಗೈರಾಗಿದ್ದರು. ಅಧ್ಯಕ್ಷೆ ಪತಿ ನಾಗರಾಜು ಉದ್ಘಾಟನೆಗೆ ಬಂದಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ರಂಗನಾಥ್ ‘ನಿಮ್ಮ ಹಾಜರಿಯನ್ನು ಪರಿಗಣಿಸಲು ಸಾಧ್ಯವಿಲ್ಲ ದಯವಿಟ್ಟು ಹಿಂದೆ ಸರಿಯಿರಿ’ ಎಂದರು. ಮಂಜುಳಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಿದರು. ಪುರಸಭೆ ಸದಸ್ಯ ಶ್ರೀನಿವಾಸ್ ಮೂರ್ತಿ ದೇವರಾಜು ಗಂಗಲಕ್ಷ್ಮಮ್ಮ ಮಂಜುಳಾ ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ ಮುಖಂಡ ಅಡಿಟರ್ ನಾಗರಾಜು ಮಲ್ಯ ನಾಗರಾಜು ನೋಡಲ್ ಅಧಿಕಾರಿ ಡಾ.ಪ್ರಭಾ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮರಿಯಪ್ಪ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್ ಬಾಬು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.