ತೊಂದರೆ ಇಲ್ಲ ವೈದ್ಯರು ರೋಗಿಗಳ ಜತೆಗೆ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ. ಇಲ್ಲಿಗೆ ಬಂದರೆ ರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಸಿಬ್ಬಂದಿಯೂ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ. ಈಗ ಯಾವುದೇ ತೊಂದರೆ ಇಲ್ಲ. ಎಲ್ಲ ಕೆಲಸಗಳು ಚೆನ್ನಾಗಿ ನಡೆಯುತ್ತಿವೆ.
ನಿಜಗುಣಯ್ಯ, ಜಯಪುರ
ಅಲೆಯುವುದು ತಪ್ಪಿದೆ ದೇವರಾಜ ಅರಸು ಬಡಾವಣೆಯ ಎಲ್ಲರು ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಇಲ್ಲಿ ಅಗತ್ಯ ಔಷಧಿ ನೀಡುತ್ತಾರೆ. ಕ್ಲಿನಿಕ್ ಇರುವುದರಿಂದ ಬಡಾವಣೆ ಜನರಿಗೆ ತುಂಬಾ ಪ್ರಯೋಜನವಾಗಿದೆ. ಜ್ವರ ಬಂದರೂ ದೊಡ್ಡಾಸ್ಪತ್ರೆಗೆ ಹೋಗಬೇಕಿತ್ತು. ಈಗ ಆಸ್ಪತ್ರೆಗೆ ಅಲೆಯುವುದು ತಪ್ಪಿದೆ.